ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕು ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದು, ಹಳೇ ಕಟ್ಟಡದ ಕಾರಿಡಾರ್ನಲ್ಲಿ ಬೆಡ್ ಹಾಕಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪರಿಸ್ಥಿತಿ ಬಂದೊದಗಿದೆ.

ಸಂಸದ ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ನಡೆದ ಉಪಚುನಾವಣೆ ಸಂದರ್ಭದಲ್ಲಿ ಶಿಗ್ಗಾವಿ ತಾಲ್ಲೂಕು ಆಸ್ಪತ್ರೆ ಅಭಿವೃದ್ಧಿಯನ್ನೇ ಅಸ್ತ್ರವಾಗಿಟ್ಟುಕೊಂಡು ಕಾಂಗ್ರೆಸ್–ಬಿಜೆಪಿ ಪಕ್ಷದವರು ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿ 10 ತಿಂಗಳಾಗಿದ್ದು, ಆಸ್ಪತ್ರೆಯ ಹೊಸ ಕಟ್ಟಡದ ಕೆಲಸ ಮಾತ್ರ ಪೂರ್ಣಗೊಳ್ಳುತ್ತಿಲ್ಲ.

ಶಿಗ್ಗಾವಿ ಪಟ್ಟಣ ಹಾಗೂ ತಾಲ್ಲೂಕಿನಲ್ಲಿ ರೈತಾಪಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಉಂಟಾದರೂ ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿರುವ 100 ಬೆಡ್ಗಳ ತಾಲ್ಲೂಕು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ನಿತ್ಯವೂ 50ರಿಂದ 80 ಮಂದಿ ಆಸ್ಪತ್ರೆಗೆ ಬರುತ್ತಿದ್ದು, ಇದರಲ್ಲಿ ನಿತ್ಯವೂ 10ರಿಂದ 20 ಮಂದಿ ಒಳರೋಗಿಗಳಾಗಿ ದಾಖಲಾಗುತ್ತಿದ್ದಾರೆ.

ತಾಲ್ಲೂಕು ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು, ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿವೆ. ಇಂಥ ಸಂದರ್ಭದಲ್ಲಿ ಗಾಯಾಳುಗಳನ್ನು ಸಹ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದೇ ಕ್ಷೇತ್ರದ ಶಾಸಕರಾಗಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ, ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವ ಉದ್ದೇಶದಿಂದ 100 ಬೆಡ್ಗಳ ಆಸ್ಪತ್ರೆಯನ್ನು 250 ಬೆಡ್ ಆಸ್ಪತ್ರೆಯಾಗಿ ಮೇಲ್ದರ್ಜೇಗೇರಿಸಿದ್ದರು. ₹ 96.50 ಕೋಟಿ ವೆಚ್ಚ ಹೊಸ ಕಟ್ಟಡ ನಿರ್ಮಾಣಕ್ಕೆ 2022ರ ಡಿಸೆಂಬರ್ 4ರಂದು ಪೂಜೆ ಸಲ್ಲಿಸಿದ್ದರು. ಎರಡು ವರ್ಷದಲ್ಲಿ ಕಾಮಗಾರಿ ಮುಗಿಸುವಂತೆ ಗಡುವು ನೀಡಿದ್ದರು.

ಕಾಮಗಾರಿ ಶುರುವಾಗಿ ಮೂರು ವರ್ಷವಾದರೂ ಕಟ್ಟಡ ನಿರ್ಮಾಣ ಕೆಲಸ ಮುಗಿಯುತ್ತಿಲ್ಲ. ನಿಗದಿತ ದಿನದೊಳಗೆ ಕಾಮಗಾರಿ ಮುಗಿಸುವ ಷರತ್ತು ಉಲ್ಲಂಘನೆ ಮಾಡಿರುವ ಗುತ್ತಿಗೆದಾರರು, ಮತ್ತಷ್ಟು ತಿಂಗಳು ಕಾಲಾವಕಾಶ ಕೋರುತ್ತಿದ್ದಾರೆ. ಆದರೆ, ಹಳೇ ಕಟ್ಟಡದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಪರದಾಡುತ್ತಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಲಾಯನ್ ಹಚ್ಚುತ್ತಿರುವ ವೈದ್ಯರು, ಅವರನ್ನು ಕಾರಿಡಾರ್ನಲ್ಲೇ ಮಲಗಿಸುತ್ತಿದ್ದಾರೆ. ಆಸ್ಪತ್ರೆಯ ಖಾಲಿ ಜಾಗದಲ್ಲೆಲ್ಲ ಬೆಡ್ಗಳನ್ನು ಹಾಕಲಾಗಿದೆ. ಜಾಗ ಕಿರಿದಾಗಿರುವುದರಿಂದ, ರೋಗಿಗಳ ಚಿಕಿತ್ಸೆಗೆ ತೊಂದರೆ ಉಂಟಾಗುತ್ತಿದೆ. ಗರ್ಭಿಣಿಯರು, ವೃದ್ಧರ ಪಾಡು ಹೇಳತೀರದ್ದಾಗಿದೆ. ಎಂಟು ವೈದ್ಯರ ಜಾಗದಲ್ಲಿ ಆರು ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ಕೊರತೆಯೂ ಇದೆ.

‘ಹೊಸ ಕಟ್ಟಡ ನಿರ್ಮಾಣಕ್ಕಾಗಿ, ಹಳೇ ಕಟ್ಟಡದ ಅರ್ಧ ಭಾಗವನ್ನು ನೆಲಸಮ ಮಾಡಲಾಗಿದೆ. ಇನ್ನರ್ಧ ಭಾಗದಲ್ಲಿ ಆಸ್ಪತ್ರೆ ನಡೆಯುತ್ತಿದ್ದು, 100 ಬೆಡ್ ಇರಿಸುವಷ್ಟು ಜಾಗವಿಲ್ಲ. ಹೀಗಾಗಿ, ಕಾರಿಡಾರ್ನಲ್ಲಿಯೇ ಬೆಡ್ ಹಾಕಿ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ವೈದ್ಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘250 ಬೆಡ್ ಆಸ್ಪತ್ರೆಯ ಹೊಸ ಕಟ್ಟಡದ ನಿರ್ಮಾಣ ಕೆಲಸ ನಿಧಾನವಾಗಿ ನಡೆಯುತ್ತಿದೆ. ಡಿಸೆಂಬರ್ನವರೆಗೂ ಕಾಲಾವಕಾಶ ನೀಡುವಂತೆ ಗುತ್ತಿಗೆದಾರರು ಕೇಳುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುವುದಿಲ್ಲ. ಆಸ್ಪತ್ರೆಯೆಂದರೆ ಕಟ್ಟಡ ಮಾತ್ರವಲ್ಲ, ಎಲ್ಲ ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕು. ಹೀಗಾಗಿ, ಎಲ್ಲ ಪೂರ್ಣಗೊಳ್ಳಲು ಇನ್ನೊಂದು ವರ್ಷವೇ ಬೇಕಾಗಬಹುದು’ ಎಂದು ಹೇಳಿದರು.

ಹೊಸ ಕಟ್ಟಡದ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಹಸ್ತಾಂತರಿಸುವಂತೆ ಕೋರುತ್ತಿದ್ದೇವೆ. ಆದರೆ ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ.
– ಮಲ್ಲಕಾಜಯ್ಯ, ಆಡಳಿತಾಧಿಕಾರಿ ಶಿಗ್ಗಾವಿ ತಾಲ್ಲೂಕು ಆಸ್ಪತ್ರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.