ಶಿಗ್ಗಾವಿ: ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಸಿಂಧಗಿ ಶಾಂತ ವಿರೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭ ಅಂಗವಾಗಿ ಏ.18ರಿಂದ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಏ.18ರಂದು ಬೆಳಿಗ್ಗೆ 11ಕ್ಕೆ ಹಾವೇರಿ ಸಿಂಧಗಿ ಮಠದಿಂದ ಶಾಂತವೀರೇಶ್ವರ ಶಿಲಾ ಮೂರ್ತಿ ಮೆರವಣಿಗೆ, ಬೈಕ್ ರ್ಯಾಲಿ ಮೂಲಕ ಹೋತನಹಳ್ಳಿಯವರೆಗೆ ವಿವಿಧ ವಾದ್ಯಗಳೊಂದಿಗೆ ನಡೆಯಲಿದೆ. ಸಂಜೆ 7ಕ್ಕೆ ಆಧ್ಯಾತ್ಮಿಕ ಪ್ರವಚನ ಆರಂಭವಾಗಲಿದೆ. ಹುಬ್ಬಳ್ಳಿಯ ಮೂರುಸಾವಿರಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೋತನಹಳ್ಳಿ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನೇತೃತ್ವ ವಹಿಸುವರು. ಬೊಮ್ಮನಹಳ್ಳಿ ವಿರಕ್ತಮಠದ ಶಿವಯೋಗೇಶ್ವರ ಸ್ವಾಮೀಜಿ ಉದ್ಘಾಟಿಸುವರು. ಹೊಸನಗರದ ಚನ್ನಬಸವ ಸ್ವಾಮೀಜಿ, ಸಿಂಧಗಿಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ಇಳಕಲ್ಲದ ಅನ್ನದಾನ ಶಾಸ್ತಿ, ಗದಗದ ಮಾಲೇಶ ವಡಗೇರಿ, ಅಣ್ಣಪ್ಪ ಕುಡತನಿ ಅವರಿಂದ ಪ್ರವಚನ ನಡೆಯಲಿದೆ.

ಏ.19ರಂದು ನಡೆಯವ ಕಾರ್ಯಕ್ರಮದ ಸಾನ್ನಿಧ್ಯವನ್ನು ಶಿರಹಟ್ಟಿ ಫಕೀರ ಸಿದ್ದರಾಮ ಸ್ವಾಮೀಜಿ ವಹಿಸುವರು. ಅಕ್ಕಿ ಆಲೂರ ಶಿವಬಸವ ಸ್ವಾಮೀಜಿ ಸಮ್ಮುಖ ವಹಿಸುವರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಗಳು ನಡೆಯಲಿವೆ.

20ರಂದು ಬೆಳಿಗ್ಗೆ 7ಕ್ಕೆ ನವಗ್ರಹಗಳ ಪ್ರಾಣ ಪ್ರತಿಷ್ಠಾಪನೆ, 10ಗಂಟೆಗೆ ಬಸವ ಜಯಂತಿ ಆಂಗವಾಗಿ ವಚನ ವಾಚನ ಸ್ಪರ್ಧೆ ನಡೆಯಲಿದೆ.21ರಂದು ಸಂಜೆ 6ಕ್ಕೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.

22ರಂದು ಪ್ರವಚನ ಕಾರ್ಯಕ್ರಮ, ಹೋತನಹಳ್ಳಿ ಸಿಂಧಗಿಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಷಷ್ಠ್ಯಬ್ದಿ ಹಾಗೂ ರಜತ ಮಹೋತ್ಸವ, ತುಲಾಭಾರ ಕಾರ್ಯಕ್ರಮ ಜರುಗಲಿದೆ. 23ರಂದು ಬೆಳಿಗ್ಗೆ 5ಕ್ಕೆ ಹೋಮ, ವಾಸ್ತು ಶಾಂತಿ, ಶಿಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ, ಸಂಜೆ 7ಕ್ಕೆ ಪ್ರವಚನ ಮಹಾಮಂಗಲ ಮತ್ತು ಧರ್ಮಸಭೆ ನಡೆಯಲಿದೆ ಎಂದು ಸೇವಾ ಸಮಿತಿ ಸದಸ್ಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-22-1940054796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.