ಶಿಗ್ಗಾವಿ: ಕಾರ್ಮಿಕರು ದೇಶದ ಬೆನ್ನೆಲುಬಾಗಿದ್ದು, ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದು ಯುವ ಪ್ರಶಸ್ತಿ ಪುರಸ್ಕೃತ ಕಲಾವಿದ ಶರೀಫ ಮಾಕಪ್ಪನವರ ಹೇಳಿದರು.

ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರ ತಾಲ್ಲೂಕು ಛಲವಾದಿ ಮಹಾಸಭಾ ಹಾಗೂ ಹಡಪದ ಅಪ್ಪಣ್ಣ ಸಮಾಜದ ಸಹಯೋಗದಲ್ಲಿ ನಡೆದ ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಿಹಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಪೂರ್ವ ಕಾಲದಲ್ಲಿ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳು ಇರಲಿಲ್ಲ. ಎಲ್ಲ ಕಾರ್ಮಿಕರು ದಿನದ 18 ಗಂಟೆಗಳ ಕಾಲ ಕೆಲಸ ಮಾಡಬೇಕಿತ್ತು. ಆದರೆ ಸ್ವಾತಂತ್ರ್ಯಾ ನಂತರ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಕಾರ್ಮಿಕರಿಗಾಗಿ ಹಲವಾರು ಕಾನೂನು ಮಾಡಿ ಯೋಜನೆಗಳನ್ನು ಜಾರಿಗೆ ತಂದರು. ಎಲ್ಲ ಕಾರ್ಮಿಕರು ದಿನದಲ್ಲಿ 8 ಗಂಟೆಗಳ ಕಾಲ ಕೆಲಸ ಮಾಡುವ ಕಾಯ್ದೆ ಜಾರಿ ಮಾಡಿದರು ಎಂದರು.

ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಪ್ರಮೋದಕುಮಾರ ಚಲವಾದಿ ಮಾತನಾಡಿ, ಯಾವುದೇ ಕಾರ್ಮಿಕರಾಗಲಿ ಸಮಾಜದ ಶ್ರೇಯೋಭಿವೃದ್ಧಿಗೆ ಹಗಲಿರುಳೆನ್ನದೆ ದುಡಿಯುತ್ತಾರೆ. ಕಾರ್ಮಿಕರಲ್ಲಿ ಅನೇಕ ಪ್ರಕಾರದ ಕಾರ್ಮಿಕರಿದ್ದು, ಅದರಲ್ಲಿ ವಲಸೆ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರು ಇದ್ದು, ವಲಸೆ ಕಾರ್ಮಿಕರು ಸುಮಾರು ತಿಂಗಳು ಕೆಲಸವಿಲ್ಲದೆ ಕಷ್ಟ ಪಡುತ್ತಾರೆ. ಇಂತಹ ಕಾರ್ಮಿಕರ ಮಕ್ಕಳು ಶಿಕ್ಷಣ ಹಾಗೂ ಅನೇಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಕಾರ್ಮಿಕರ ಮಕ್ಕಳು ಹಾಗೂ ಕುಟುಂಬಕ್ಕೆ ಸರ್ಕಾರ ಸಂಘ ಸಂಸ್ಥೆಗಳು ಸಹಾಯ ಸಹಕಾರ ಮಾಡಬೇಕು ಎಂದರು.

ಹಡಪದ ಅಪ್ಪಣ್ಣ ಸಮಾಜದ ತಾಲ್ಲೂಕು ಅಧ್ಯಕ್ಷ ಮಂಜುನಾಥ ಕ್ಷವರದ, ಪುರಸಭೆ ಮುಖ್ಯಧಿಕಾರಿ ಮಲ್ಲೇಶ್ ಆರ್ ಮಾತನಾಡಿದರು.

ಸಹಾಯಕ ಪ್ರಾಧ್ಯಾಪಕ ಚಂದ್ರಪ್ಪ ಸೊಬಟಿ, ತಾಲ್ಲೂಕು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಮಹೇಶ ಕಳಸದ, ಪ್ರಕಾಶ ಹರಿಗೊಂಡ, ಪ್ರಕಾಶ ಮೇಧಾರ ಸೇರಿದಂತೆ ಪುರಸಭೆ ಸಿಬ್ಬಂದಿಗಳು, ಪೌರ ಕಾರ್ಮಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-22-568696421

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.