ಶಿಗ್ಗಾವಿ: ‘ಜನಪ್ರತಿನಿಧಿಗಳಲ್ಲಿ ಸೇವಾ ಮನೋಭಾವವಿದ್ದರೆ ಗ್ರಾಮೀಣ ಅಭಿವೃದ್ಧಿ ಕಾರ್ಯ ನಡೆಯಲು ಸಾಧ್ಯ’ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು.

ತಾಲ್ಲೂಕಿನ ಸುರಪಗಟ್ಟಿ ಗ್ರಾಮದಲ್ಲಿ ಮಂಗಳವಾರ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯವನ್ನು ಆಯಾ ಇಲಾಖೆಯ ಅಧಿಕಾರಿಗಳು ಮಾಡಬೇಕು. ಅದರಿಂದ ಸರ್ಕಾರದ ಪ್ರತಿ ಯೋಜನೆ ಯಶಸ್ವಿಯಾಗಲು ಸಾಧ್ಯ. ಫಲಾನುಭವಿಗಳು ಯೋಜನೆಯ ಲಾಭ ಅನುಭವಿಸಲು ಸಾಧ್ಯ’ ಎಂದರು.

ಸರ್ಕಾರದ ಯೋಜನೆಗಳ ಅನುದಾನ ಬಿಡುಗಡೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಅಕ್ರಮವಾಗಿ ಹಣ ವಸೂಲಿ ಮಾಡಿದಲ್ಲಿ ತಕ್ಷಣ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅಕ್ರಮವಾಗಿ ಹಣ ವಸೂಲಿ ಮಾಡುವುದನ್ನು ತಡೆಯಬೇಕು. ಬಡ ಅರ್ಹ ಫಲಾನುಭವಿಗಳನ್ನು ಕಚೇರಿಗೆ ಅಲೆದಾಡಿಸಬೇಡಿ. ಅವರ ಕೆಲಸ ಕಾರ್ಯಗಳನ್ನು ಶೀಘ್ರವಾಗಿ ಮಾಡಿ. ಕೂಲಿನಾಲಿ ಬಿಟ್ಟು ಅಲೆದಾಡುವಂತೆ ಮಾಡುವುದು ಸರಿಯಲ್ಲ. ಅಂದಿನ ಕೆಲಸ ಅಂದೇ ಮಾಡಿ ಮುಗಿಸಬೇಕು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ತಾಲ್ಲೂಕಿನ ಸುರಪಗಟ್ಟಿ ಕಂದಾಯ ಗ್ರಾಮ ಹಾಗೂ ಉಪಗ್ರಾಮಗಳ ಒಟ್ಟು 111 ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ತಾಲ್ಲೂಕಿನ ಪ್ರತಿ ಗ್ರಾಮದಲ್ಲಿಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರ ವಿತರಿಸಲಾಗುತ್ತಿದೆ. ಅದರಿಂದ ಬಡ ಜನತೆಗೆ ಶಾಶ್ವತ ಪರಿಹಾರ ನೀಡಿದಂತಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಅಭಿವೃದ್ಧಿ ಕಾರ್ಯಗಳು ಜನಮನಕ್ಕೆ ತಲುಪುತ್ತಿವೆ. ಹೀಗಾಗಿ ಕಾಂಗ್ರೆಸ್ಗೆ ಜನರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ₹ 1,400 ಕೋಟಿ ಅನುದಾನ ನೀಡಿದ್ದಾರೆ. ಅದರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

‘ಕ್ಷೇತ್ರದಲ್ಲಿ 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ. ಅದರಲ್ಲಿ ಈಗಾಗಲೆ 12 ಸಾವಿರ ಮನೆ ಇಲ್ಲದ ಬಡ ಕೂಲಿಕಾರರಿಗೆ ಆಸರೆ ನೀಡಲಾಗಿದೆ. ಅಲ್ಲದೇ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಹೊಸ ಯೋಜನೆಗಳನ್ನು ರೂಪಿಸಲಾಗುತ್ತಿದೆ’ ಎಂದರು.

ಗ್ಯಾರಂಟಿ ಯೋಜನೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಬಾಬೆ ಬೊವಾಜಿ, ಚಂದ್ರು ಮಾಯಣ್ಣವರ, ಅಣ್ಣಪ್ಪ ಲಮಾಣಿ, ಮಲ್ಲಿಕಾರ್ಜುನಗೌಡ ಪಾಟೀಲ, ವಸಂತಾ ಬಾಗೂರ, ಮಾಲತೇಶ ಸಾಲಿ, ಮಲ್ಲಮ್ಮ ಸೋಮನಕಟ್ಟಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-22-1710801351

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.