ಸೋಮವಾರ, ಸೆಪ್ಟೆಂಬರ್ 20, 2021
22 °C

ಶಿಗ್ಗಾವಿ–ಸವಣೂರ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸವಣೂರ: ಶಿಗ್ಗಾವಿ–ಸವಣೂರ ಕ್ಷೇತ್ರದ ಮಾಜಿ ಶಾಸಕ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ  ರಾಜಶೇಖರ ಸಿಂಧೂರ (60) ಶನಿವಾರ ಪಟ್ಟಣದ ಶುಕ್ರವಾರಪೇಟೆ ಬಡಾವಣೆಯ ಸ್ವಗೃಹದಲ್ಲಿ ನಿಧನರಾದರು. 

ಅವರಿಗೆ ಪತ್ನಿ ಅಲಕಾ, ಪುತ್ರ ಸುಮಂತ್‌ ಹಾಗೂ ಪುತ್ರಿ ಸುಚೇತಾ ಇದ್ದಾರೆ.

2004ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮೊದಲ ಬಾರಿಗೆ ಶಾಸಕರಾಗಿದ್ದರು. ಕರ್ನಾಟಕ ರಾಜ್ಯ ಸಾವಯವ ಮಿಷನ್‌ ನಿರ್ದೇಶಕರಾಗಿ, ಕಾರಡಗಿ ಸುಕ್ಷೇತ್ರದ ವೀರಭದ್ರೇಶ್ವರ ದೇವಸ್ಥಾನದ ಟ್ರಸ್ಟ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 

ಸವಣೂರು ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು