ಶಿಗ್ಗಾವಿ (ಹಾವೇರಿ ಜಿಲ್ಲೆ): ತಾಲ್ಲೂಕಿನ ಕನಕದಾಸರ ಬಾಡ ಗ್ರಾಮದಲ್ಲಿನ ಅಟಲ್ ಬಿಹಾರಿ ವಾಜಪೇಯ ವಸತಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಹೇಮರಾಜ್ ಅವರನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಿರುವ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಂಗಳವಾರ ಐನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪಾಲಕರು ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಈ ಕುರಿತು ಈ ಹಿಂದೆ ಪ್ರತಿಭಟನೆ ನಡೆಸಿದಾಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವಗ್ಗಪ್ಪನವರ ಅವರು ಹೇಮರಾಜ್ ಶಿಕ್ಷಕರನ್ನು ಮುಂದುವರಿಸುವಂತೆ ವಿದ್ಯಾರ್ಥಿಗಳಿಗೆ ಲಿಖಿತ ರೂಪದಲ್ಲಿ ಭರವಸೆ ನೀಡಿದ್ದರು. ಇಲ್ಲಿನ ವಿದ್ಯಾರ್ಥಿಗಳ ಪರೀಕ್ಷಾ ಹಿತದೃಷ್ಠಿಯಿಂದ ಶಿಕ್ಷಕರನ್ನು ವರ್ಗಾಯಿಸಬಾರದು. ಹೇಮರಾಜ್ ಶಿಕ್ಷಕರು ವರ್ಗಾವಣೆಗೊಂಡು ಈ ಶಾಲೆಗೆ ಬಂದು ಕೇವಲ ಒಂದು ವರ್ಷವಾಯಿತು. ದಿಢೀರನೇ ಅವರನ್ನು ಬೇರೆ ಶಾಲೆಗೆ ವರ್ಗಾವಣೆ ಮಾಡಿರುವ ಉದ್ದೇಶ ಏನು?’ ಎಂದು ವಿದ್ಯಾರ್ಥಿಗಳ ಪಾಲಕರು ಪ್ರಶ್ನಿಸಿದರು.

ಕಳೆದ ಎರಡು ದಿನಗಳಿಂದ ಹೇಮರಾಜ್ ಶಿಕ್ಷಕರು ಶಾಲೆಗೆ ಬಾರದೇ ಇರುವುದನ್ನು ಗಮನಿಸಿದ ವಿದ್ಯಾರ್ಥಿಗಳು, ವಿಷಯವನ್ನು ಪಾಲಕರಿಗೆ ತಿಳಿಸಿದ್ದಾರೆ. ಪಾಲಕರು ಮಂಗಳವಾರ ಶಾಲೆಗೆ ಭೇಟಿ ನೀಡಿದಾಗ, ರಾಜ್ಯ ಕಾರ್ಯನಿರ್ವಾಹಕ ನಿರ್ದೇಶಕರ ಕರೆಯ ಮೇರೆಗೆ ಹೇಮರಾಜ್ ಶಿಕ್ಷಕರು ಬೆಂಗಳೂರಿಗೆ ಹೋಗಿರುವುದಾಗಿ ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಪಾಲಕರು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆಗೆ ಮುಂದಾದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಾಧರ ಹೊನ್ನಣ್ಣವರ, ವಿದ್ಯಾರ್ಥಿಗಳ ಪಾಲಕರಾದ ಭಾಗ್ಯಲಕ್ಷ್ಮೀ ಗುಡಿಸಾಗರ, ಸುರೇಶ ಅಗಸಾಲಿ, ಭರಮಪ್ಪ ಡಾನಗಲ್, ರಮೇಶ ಗುಡಿಸಾಗರ, ಪುಟ್ಟಪ್ಪ ಕುಂದೂರ, ಶಿವಾನಂದ ತೊಂಡೂರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.