ಹೋರಾಟಕ್ಕೂ ಸಿದ್ಧ: ಹೂಣ್ಣನವರ
‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಶಿಕ್ಷಕರನ್ನು ನಿಯೋಜನೆ ಮತ್ತು ವರ್ಗಾವಣೆ ಮಾಡಬಾರದು. ಬಾಡ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಕುಳಿತು ಬಾಡ ಗ್ರಾಮದ ಪರಿಸ್ಥಿತಿ ಅರಿಯಲು ಸಾಧ್ಯವಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಇಲ್ಲಿನ ವಿದ್ಯಾರ್ಥಿಗಳ ಮನೋಭಾವ ಅರಿತು ನಿರ್ಧಾರ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ ಹೋರಾಟ ಮಾಡಲು ಸಿದ್ದರಾಗಿದ್ದೇವೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಧರ ಹೊಣ್ಣನವರ ಎಚ್ಚರಿಕೆ ನೀಡಿದರು.