ಶಿಗ್ಗಾವಿ: ‘ಗ್ರಾಮೀಣ ಪ್ರದೇಶದಲ್ಲಿರುವ ರೈತರನ್ನು ಸಿಕ್ಕ ಕೆಲಸಕ್ಕಾಗಿ ತಹಶೀಲ್ದಾರ್ ಕಚೇರಿಗೆ ಅಲೆದಾಡಿಸುವುದು ಸರಿಯಲ್ಲ. ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಶಾಸಕ ಯಾಸೀರ ಅಹ್ಮದಖಾನ್ ಪಠಾಣ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಶನಿವಾರ ನಡೆದ ಶಿಗ್ಗಾವಿ, ಸವಣೂರ ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟ್ಯಾಪ್, ಸಾರ್ವಜನಿಕರಿಗೆ ಗಣಕೀಕೃತ ಭೂ ದಾಖಲೆಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ ಮುಖ್ಯವಾಗಿದ್ದು, ಅದಕ್ಕಾಗಿ ಭೂ ದಾಖಲೆಗಳ ಗಣಕೀಕರಣ ಕಾರ್ಯ ನಡೆಯುತ್ತಿದೆ. ಇದರಿಂದ ದಾಖಲೆಗಳು ರೈತರಿಗೆ ಸುಲಭವಾಗಿ ಸಿಗುತ್ತವೆ. ರೈತರ ಶ್ರಮ ಮತ್ತು ಸಮಯ ಉಳಿತಾಯವಾಗಲಿದೆ’ ಎಂದು ಹೇಳಿದರು.

‘ಕ್ಷೇತ್ರದ 16 ಲಕ್ಷ ರೈತರ ಭೂ ದಾಖಲೆಗಳನ್ನು ಗಣಕೀಕರಣ ಮಾಡಲಾಗಿದೆ. ಶಿಗ್ಗಾವಿ, ಸವಣೂರಿನ 50 ಗ್ರಾಮಗಳಲ್ಲಿನ 25 ಸಾವಿರ ಜನರಿಗೆ ಆಸ್ತಿ ಪಟ್ಟಾ ವಿತರಿಸಲಾಗಿದೆ. ಮೃತ ವ್ಯಕ್ತಿಗಳ ಹೆಸರಿನಲ್ಲಿನ 11,992 ಖಾತೆಗಳ ವಾರಸಾ ದಾಖಲೆಗಳನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಶ್ರಮಿಸಿದರೆ ಮಾತ್ರ ಜನರ ಬಾಳು ಹಸನಾಗುತ್ತದೆ’ ಎಂದರು.

‘ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿಗೆ ಬಂದ ನಂತರ ರೈತರಿಗೆ ದಾಖಲೆ ನೀಡುಬೇಕಿತ್ತು. ಈಗ ಲ್ಯಾಪ್ಟಾಪ್ ಬಳಸಿ, ಗ್ರಾಮೀಣ ಭಾಗದ ರೈತರಿಗೆ ತ್ವರಿತವಾಗಿ ದಾಖಲೆಗಳನ್ನು ನೀಡಬಹುದಾಗಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡರೆ, ರೈತರಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.

ಸವಣೂರ ತಹಶೀಲ್ದಾರ್ ಭರತಕುಮಾರ, ಪುರಸಭೆ ಸದಸ್ಯರಾದ ಗೌಸಖಾನ್ ಮುನಸಿ, ವಸಂತಾ ಬಾಗೂರ, ಅಯೊಬಖಾನ್ ಪಠಾಣ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ. ಮುಲ್ಲಾ, ಮುಖಂಡರಾದ ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಲಕ್ಷ್ಮೀ ಮಾಳಗಿಮನಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ಮಾಳವಾಡ ಇದ್ದರು.

‘6.32 ಲಕ್ಷ ದಾಖಲೆ ಗಣಕೀಕರಣ’ ‘ಕ್ಷೇತ್ರದಲ್ಲಿ ಅನಧಿಕೃತವಾಗಿರುವ 450 ಮನೆಗಳನ್ನು ಗುರುತಿಸಿ 530 ಜನ ಫಲಾನುಭವಿಗಳಿಗೆ ಪಟ್ಟಾ ನೀಡಲಾಗಿದೆ. 34 ಸಾವಿರ ಫಲಾನುಭವಿಗಳಿಗೆ ವಿವಿಧ ಪಿಂಚಣಿ ವಿತರಿಸಲಾಗುತ್ತಿದೆ. 6.32 ಲಕ್ಷ ಜನರ ದಾಖಲೆಗಳನ್ನು ಗಣಕೀಕರಣ ಮಾಡಲಾಗಿದೆ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹೊಲಕ್ಕೆ ಹೋಗುವ ರಸ್ತೆ ನಿರ್ಮಾಣದ ಸಮಸ್ಯೆ ಪರಿಹರಿಸಲಾಗಿದೆ. ರೈತರು ಸುಲಭವಾಗಿ ಹಾಗೂ ತಕ್ಷಣ ತಮ್ಮ ಆಸ್ತಿಯ ದಾಖಲೆ ತಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ’ ಎಂದು ತಹಶೀಲ್ದಾರ್ ರವಿ ಕೊರವರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.