ಶಿಗ್ಗಾವಿ: ಪಟ್ಟಣದ ಸವಣೂರ ರಸ್ತೆಯಲ್ಲಿನ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಗಂಗಮ್ಮ ಎಸ್.ಬೊಮ್ಮಾಯಿ ಟ್ರಸ್ಟ್ ಹಾಗೂ ಹುಬ್ಬಳ್ಳಿ ಸೋಮಪ್ಪ ಆರ್.ಬೊಮ್ಮಾಯಿ ಟ್ರಸ್ಟ್ ಇವರ ಸಹಯೋಗದಲ್ಲಿ ಮೇ 29ರಂದು ಬೆಳಿಗ್ಗೆ 10ರಿಂದ ಸಂಜೆ 4ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದೆ ಎಂದು ಬಿಜೆಪಿ ಮುಖಂಡ ಭರತ ಬೊಮ್ಮಾಯಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಲಿಖಿತ ಹೇಳಿಕೆ ನೀಡಿದ ಅವರು, ಕ್ಷೇತ್ರದ ನಿರುದ್ಯೋಗಿ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವ ಉದ್ದೆಶದಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಅರ್ಹ ವಿದ್ಯಾವಂತ ಯುವಕರು ಅದರ ಪ್ರಯೋಜನ ಪಡೆಯಲು ಮುಂದಾಗಬೇಕು. ಮೇಳದಲ್ಲಿ ಬೆಂಗಳೂರಿನ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಮಹೀಂದ್ರಾ, ಕ್ವೆಸ್, ಟಿ.ವಿ.ಎಸ್ ಸೇರಿದಂತೆ ಹಲವು ಕಂಪನಿಗಳ ವತಿಯಿಂದ ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಇತರ ಪದವಿ ಪಡೆದ ನಿರುದ್ಯೋಗಿ ವಿದ್ಯಾವಂತ ಯುಕ, ಯುವತಿಯರು ಉದ್ಯೋಗ ಮೇಳದಲ್ಲಿ ತಮ್ಮ ಮೂಲ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಅರ್ಹತೆಗೆ ತಕ್ಕ ಉದ್ಯೋಗ ಪಡೆಯಲು ಮುಂದಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9148130287, 6366352281 ಅವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-22-1663244858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.