ಶಿಗ್ಗಾವಿ: ಪಟ್ಟಣದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏಪ್ರಿಲ್ 2ರಂದು ಜರುಗಲಿದೆ.

ವೀರಗಲ್ಲಿ ವೀರಭದ್ರೇಶ್ವರ ದೇವಸ್ಥಾನ ಸೇವಾ ಸಮಿತಿ ನೇತೃತ್ವದಲ್ಲಿ ಕಳಸಾರೋಹಣ ಹಾಗೂ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮಗಳು ಮುಕ್ತಾಯವಾಗಿದ್ದು, ಏಪ್ರಿಲ್ 1ರಂದು ದೇವಸ್ಥಾನದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಹಂದರ ಹಾಕುವ ಮೂಲಕ ರಥೋತ್ಸವಕ್ಕೆ ಅಂತಿಮ ಸಿದ್ಧತೆಗಳು ನಡೆಯಲಿವೆ. ಏಪ್ರಿಲ್ 2ರಂದು ದವನದ ಹುಣ್ಣಿಮೆಯ ಅಂಗವಾಗಿ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪೂಜೆ ಹಾಗೂ ಮಹಾಮಂಗಳಾರತಿ ಜರುಗಲಿದೆ. ಮಧ್ಯಾಹ್ನ 1 ಗಂಟೆಯಿಂದ ಮಹಾಪ್ರಸಾದ ವ್ಯವಸ್ಥೆ ಇರಲಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೆಳಗ್ಗೆ 8ಗಂಟೆಗೆ 'ಗುಗ್ಗಳ' ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ವೀರಭದ್ರೇಶ್ವರ ರಥೋತ್ಸವ (ತೇರು) ಚಾಲನೆಗೊಳ್ಳಲಿದೆ. 5 ಗಂಟೆಗೆ ದೀವಟಗೆ ಸೇವೆ ನೆರವೇರಲಿದೆ. ಏಪ್ರಿಲ್ 3ರಂದು ಸಂಜೆ 4ಗಂಟೆಗೆ ಸಾಂಪ್ರದಾಯಿಕ 'ಕಡುಬಿನ ಕಾಳಗ' ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಗಂಜೀಗಟ್ಟಿ ವೈಜನಾಥ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಸಂಗನಬಸವ ಸ್ವಾಮೀಜಿ, ಗೊಟಗೊಡಿಕೊಪ್ಪದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು, ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜರುಗಲಿದೆ. ಮಲ್ಲಿಕಾರ್ಜುನ ಸ್ವಾಮಿಗಳು ಹಿರೇಮಠ ಇವರಿಂದ ವೈದಿಕ ಸೇವೆಗಳು ನೆರವೇರಲಿವೆ ಎಂದು ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-23-723142318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.