ಗುರುವಾರ , ಅಕ್ಟೋಬರ್ 21, 2021
27 °C

ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವಾನಂದ ಗುರುಮಠ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಾನಂದ ಗುರುಮಠ

ಹಾವೇರಿ: ತಾಲ್ಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ, ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ಗುರುಮಠ (74) ಭಾನುವಾರ ನಿಧನರಾದರು. 

ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. 

ಪ್ರಗತಿಪರ ಕೃಷಿಕರಾಗಿದ್ದ ಶಿವಾನಂದ ಗುರುಮಠ ಅವರು ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಅವರ ಒಡನಾಡಿಯಾಗಿದ್ದರು. ರಾಜ್ಯ ರೈತ ಸಂಘದ ಸಂಸ್ಥಾಪಕ ಸದಸ್ಯರಲ್ಲೊಬ್ಬರು. ಸಂಗೂರಿನ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರರ ಹಾಗೂ ಕಾರ್ಖಾನೆಯ ಕಾರ್ಮಿಕರ ಹಕ್ಕುಗಳಿಗೆ ಹಲವಾರು ಹೋರಾಟಗಳನ್ನು ನಡೆಸಿದ್ದರು. 

ಎಂ.ಎಸ್ಸಿ ಪದವೀಧರರಾಗಿದ್ದ ಗುರುಮಠ ಅವರು ಕೆಲಕಾಲ ಉಪನ್ಯಾಸಕರಾಗಿಯೂ ಕಾರ್ಯನಿರ್ವಹಿಸಿದ್ದರು. ರೈತರಿಗೆ ಆಗುವ ಅನ್ಯಾಯ, ಶೋಷಣೆ ವಿರುದ್ಧ ಧ್ವನಿ ಎತ್ತುತ್ತಾ, ಇಳಿವಯಸ್ಸಿನಲ್ಲೂ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು