ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಆತ್ಮಹತ್ಯೆ ಹೇಳಿಕೆ: ಅನ್ನದಾತರ ಕ್ಷಮೆ ಕೋರಿದ ಸಚಿವ ಶಿವಾನಂದ ಪಾಟೀಲ

Published 25 ಸೆಪ್ಟೆಂಬರ್ 2023, 15:34 IST
Last Updated 25 ಸೆಪ್ಟೆಂಬರ್ 2023, 15:34 IST
ಅಕ್ಷರ ಗಾತ್ರ

ಹಾವೇರಿ: ‘₹5 ಲಕ್ಷ ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಹೇಳಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರು ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಸಚಿವರಿಗೆ ಘೇರಾವ್‌ ಹಾಕುತ್ತೇವೆ’ ಎಂದು ರೈತರು ಹಾವೇರಿ ನಗರದ ಪ್ರವಾಸಿ ಮಂದಿರದ ಬಳಿ ಸೋಮವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು.

ರೈತ ಸಂಘದಿಂದ ₹50 ಲಕ್ಷ ಕೊಡುತ್ತೇವೆ. ಸಚಿವರು ಆತ್ಮಹತ್ಯೆ ಮಾಡಿಕೊಳ್ಳಲಿ ಎಂದು ರೈತರು ಗುಡುಗಿದರು. ಪ್ರತಿಭಟನಾ ಸ್ಥಳಕ್ಕೆ ಸ್ಥಳೀಯ ಶಾಸಕರೊಂದಿಗೆ ಬಂದ ಸಚಿವ ಶಿವಾನಂದ ಪಾಟೀಲ ಅವರು ರೈತರ ಅಹವಾಲುಗಳನ್ನು ಆಲಿಸಿದರು.

ಪುಟಗೋಸಿ ಪರಿಹಾರಕ್ಕಲ್ಲ:

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಅವರು ರೈತರ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಬೆಳೆನಷ್ಟ ಮತ್ತು ಸಾಲಬಾಧೆಯಿಂದ ರೈತ ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆ. ಸರ್ಕಾರದ ಪುಟಗೋಸಿ ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭರವಸೆ ಇಟ್ಟು ನಿಮ್ಮ ಸರ್ಕಾರ ತಂದಿದ್ದೇವೆ ಮರೆಯಬೇಡಿ ಎಂದು ಎಚ್ಚರಿಕೆ ನೀಡಿದರು.

ಬಳಿಕ ಸಚಿವ ಮಾತನಾಡಿ, ‘ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ನಾನು ಹೇಳಿಲ್ಲ. ಅದನ್ನು ಕೆಲ ಮಾಧ್ಯಮದವರು ತಪ್ಪಾಗಿ ಬಿಂಬಿಸಿದ್ದಾರೆ. ಆದರೂ, ನಿಮ್ಮ ಮನಸ್ಸಿಗೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿ, ವಿವಾದಕ್ಕೆ ತೆರೆ ಎಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT