ಹಾವೇರಿ: ‘ಮಹಾಶಿವರಾತ್ರಿ’ ಅಂಗವಾಗಿ ನಗರದ ವಿವಿಧ ಶಿವನ ದೇವಾಲಯಗಳಲ್ಲಿ ಭಕ್ತರು ಮುಂಜಾನೆ 5ರಿಂದ ತಡರಾತ್ರಿ 12 ಗಂಟೆವರೆಗೂ ವಿಶೇಷ ಪೂಜೆ ಸಲ್ಲಿಸಿದರು.

ಭಕ್ತರು ಉಪವಾಸವಿದ್ದು, ಶಿವನ ಧ್ಯಾನದಲ್ಲಿ ತಲ್ಲೀನರಾಗಿದ್ದರು. ಶಿವನಾಮ ಸ್ಮರಣೆ, ಭಜನೆ, ಭಕ್ತಿಗೀತೆಗಳ ಮೂಲಕ ಮಹಾದೇವನನ್ನು ಆರಾಧಿಸಿದರು. ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಹೂವಿನ ಅಲಂಕಾರ ನಡೆದವು. ಭಕ್ತರಿಂದ ಘಂಟೆ ಜಾಗಟೆ, ಶಂಖ ನಾದಗಳು ಮೊಳಗಿದವು.

ನಗರದ ಪುರಸಿದ್ಧೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 5 ರಿಂದ ರಾತ್ರಿ 12.30ರವರೆಗೆ ನಿರಂತರವಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆ 7 ಗಂಟೆಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರಗಳು ನಡೆದವು. ಮಧ್ಯಾಹ್ನ ಭಸ್ಮ ಅಲಂಕಾರ ಮಾಡಿದ್ದು ಈ ಬಾರಿಯ ವಿಶೇಷವಾಗಿದೆ ಎಂದು ಅರ್ಚಕ ಅಜಯ ಹಿರೇಮಠ ತಿಳಿಸಿದರು.

ಭಕ್ತರು ವಿಶೇಷ ಅರ್ಚನೆ, ಅಭಿಷೇಕ, ಪೂಜೆ ಮಾಡಿಸುವ ಮೂಲಕ ತಮ್ಮ ಬೇಡಿಕೆಗಳು ಈಡೇರಲಿ ಎಂದು ಶಿವನಲ್ಲಿ ಬೇಡಿಕೊಂಡರು. ಈ ವಿಶೇಷ ದಿನದಂದು ಶಿವನನ್ನು ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬುದು ಭಕ್ತರ ಅಚಲ ನಂಬಿಕೆ.

ಹಾವೇರಿಯ ಬಸವೇಶ್ವರ ನಗರದ ಶಿವನ ಮೂರ್ತಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ, ಪೂಜಾ ಸಾಮಗ್ರಿಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಅಶ್ವಿನಿ ನಗರದಲ್ಲಿರುವ ಬೃಹತ್ ಶಿವನ ಮೂರ್ತಿಗೆ ಹೂವು ಮತ್ತು ದೀಪಗಳಿಂದ ಅಲಂಕಾರ ಮಾಡಲಾಗಿತ್ತು.

ಪುರಸಿದ್ಧೇಶ್ವರ ದೇವಾಲಯದ ಮುಂಭಾಗ ಹಣ್ಣಿನ ವ್ಯಾಪಾರಿಗಳು ಮತ್ತು ಕೆಲವು ವ್ಯಾಪಾರಿಗಳು ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರಿಗೆ ಉಚಿತವಾಗಿ ಕಲ್ಲಂಗಡಿ ಹಣ್ಣುಗಳನ್ನು ವಿತರಿಸಿದರು. ಕೆಲವು ಭಕ್ತರು ಪ್ರಸಾದವನ್ನು ಹಂಚಿದರು. ಹೂವು ಮತ್ತು ಹಣ್ಣಿನ ಮಾರುಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆಯಿಂದ ಸಂಜೆವರೆಗೂ ಜನರು ನೂಕುನುಗ್ಗಲಲ್ಲಿ ನಿಂತು, ಹೂವು, ಹಣ್ಣು, ಬಾಳೇಕಂದು, ತಳಿರು ತೋರಣಗಳನ್ನು ಖರೀದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.