ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ ವಿ.ವಿ.ಗಳ ಬೇಜವಾಬ್ದಾರಿಯಿಂದ ದುರ್ಘಟನೆ: ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ ಹೇಳಿಕೆ
Last Updated 6 ಮಾರ್ಚ್ 2022, 5:54 IST
ಅಕ್ಷರ ಗಾತ್ರ

ಚಳಗೇರಿ (ಕುಮಾರಪಟ್ಟಣ): ‘ನಮ್ಮ ದೇಶದ ರಾಯಭಾರಿ ಕಚೇರಿ ನಾಲ್ಕು ಬಾರಿ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಯುದ್ಧದ ಮುನ್ಸೂಚನೆ ಕೊಟ್ಟಿತ್ತು. ಆದರೆ,ಅಲ್ಲಿರುವ ವಿಶ್ವವಿದ್ಯಾಲಯಗಳ ಬೇಜವಾಬ್ದಾರಿಯಿಂದ ದುರ್ಘಟನೆ ನಡೆದಿದೆ’ ಎಂದುಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿಷಾದ ವ್ಯಕ್ತಪಡಿಸಿದರು.

ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿರುವ ಮೃತ ನವೀನ ಗ್ಯಾನಗೌಡರ ಮನೆಗೆ ಶನಿವಾರ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಅಮೆರಿಕ ಮತ್ತು ಯುರೋಪಿಯನ್ ರಾಷ್ಟ್ರಗಳು ತಮ್ಮ ದೇಶದ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಉಕ್ರೇನ್‌ನಿಂದ ವಾಪಸ್‌ ಕರೆಸಿಕೊಳ್ಳುವಲ್ಲಿ ವಿಫಲವಾಗಿವೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ದೇಶದ ಸಾವಿರಾರು ನಾಗರಿಕರು ಮತ್ತು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ನವೀನ್‌ ಮೃತಪಟ್ಟಿದ್ದು ದುಃಖಕರ ಸಂಗತಿ ಎಂದರು.

ನೀಟ್ ಎನ್ನುವುದು ಒಂದು ಪರೀಕ್ಷೆಯ ಮಾನದಂಡ. ಪರೀಕ್ಷೆ ಬರೆದು ಅರ್ಹರಾದ ಮಕ್ಕಳು ಮುಂದಿನ ವ್ಯಾಸಂಗಕ್ಕೆ ಆಯ್ಕೆಯಾಗುತ್ತಾರೆ. ಇದನ್ನು ಹೊರತುಪಡಿಸಿ ಯಾವ ರೀತಿ ಅಗತ್ಯ ಬದಲಾವಣೆ ತರಬೇಕು ಎನ್ನುವುದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT