ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

851ನೇ ಸಿದ್ಧರಾಮೇಶ್ವರ ಜಯಂತಿ ಜ.14, 15ರಂದು

ಉದ್ಘಾಟನೆಗೆ ಮಾಜಿ ಸಿಎಂ ಯಡಿಯೂರಪ್ಪ; ಸಮಾರೋಪಕ್ಕೆ ಸಿಎಂ ಸಿದ್ದರಾಮಯ್ಯ ಭಾಗಿ
Published 10 ಜನವರಿ 2024, 11:26 IST
Last Updated 10 ಜನವರಿ 2024, 11:26 IST
ಅಕ್ಷರ ಗಾತ್ರ

ಹಾವೇರಿ: ಬೆಂಗಳೂರಿನ ನೊಳಂಬ ಲಿಂಗಾಯತ ಸಂಘದ ವತಿಯಿಂದ ಗುರು ಶಿವಯೋಗಿ ಸಿದ್ಧರಾಮೇಶ್ವರರ 851ನೇ ಜಯಂತಿ ಮಹೋತ್ಸವವನ್ನು ಜ.14 ಮತ್ತು ಜ.15ರಂದು ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದ ಎ.ಪಿ.ಎಂ.ಸಿ ಆವರಣದ ಹಿಂಬದಿ ಹಮ್ಮಿಕೊಳ್ಳಲಾಗಿದೆ ಎಂದು ಹಳೇಬೀಡಿನ ಪುಷ್ಪಗಿರಿ ಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,  ಜ.14ರಂದು ಬೆಳಿಗ್ಗೆ 7.30ಕ್ಕೆ ಷಟಸ್ಥಳ ಧ್ವಜಾರೋಹಣ, ಬೆಳಿಗ್ಗೆ 8ಕ್ಕೆ ಸಿದ್ಧರಾಮೇಶ್ವರರ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. 

ಮಧ್ಯಾಹ್ನ 3ಕ್ಕೆ ಶರಣ ಸಾಹಿತ್ಯ ಗೋಷ್ಠಿಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ‘ಬಿಟ್ಟು ಬಂದಳ್ಳಿಯ ಕಥೆಗಳು’ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಚಿತ್ರನಟ ಡಾಲಿ ಧನಂಜಯ ಕ್ಯಾಲೆಂಡರ್‌ ಬಿಡುಗಡೆಗೊಳಿಸಲಿದ್ದಾರೆ. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. 

ಜ.15ರಂದು ಬೆಳಿಗ್ಗೆ 9ಕ್ಕೆ ಮಹಿಳಾ ಗೋಷ್ಠಿಯನ್ನು ಸಂಸದ ಶಿವಕುಮಾರ ಉದಾಸಿ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11ಕ್ಕೆ ಕೃಷಿ ಗೋಷ್ಠಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಸಮಾರೋಪ ನುಡಿಗಳನ್ನಾಡಲಿದ್ದಾರೆ. 

ಎರಡು ದಿನ ನಡೆಯುವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು, ಶಾಸಕರು, ಮಾಜಿ ಶಾಸಕರು, ಗಣ್ಯರು ಭಾಗವಹಿಸಲಿದ್ದಾರೆ. ಸುಮಾರು 2ರಿಂದ 3 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT