ಗುರುವಾರ , ಏಪ್ರಿಲ್ 15, 2021
31 °C

ಜನವರಿ 20ಕ್ಕೆ ರಾಜ್ಯಪಾಲರ ನಿವಾಸಕ್ಕೆ ಕಾಂಗ್ರೆಸ್‌ ಮುತ್ತಿಗೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹಾಗೂ ಅವರಿಗೆ ಆತ್ಮ ಸ್ಥೈರ್ಯ ತುಂಬುವ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ಜ.20 ರಂದು ಬೆಂಗಳೂರಿನಲ್ಲಿ ರೈತರ ಅಧಿಕಾರ ದಿನ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಅಧಿಕಾರ ದಿನದ ಅಂಗವಾಗಿ ಅಂದು ಬೆಳಿಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್‌ನಿಂದ  ಬೃಹತ್ ಪಾದಯಾತ್ರೆ ಮೂಲಕ ತೆರಳಿ  ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ನ್ಯಾಯಾಂಗ ತನಿಖೆಗೆ ಆಗ್ರಹ: ಯಡಿಯೂರಪ್ಪನವರಿಗೆ ಸಂಬಂಧಿಸಿದ ಸಿ.ಡಿ. ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ ಹಾಗೂ ಹಣ ನೀಡಿ ಕೆಲವರು ಸಚಿವರಾಗಿದ್ದಾರೆ ಎಂದು ಬಿಜೆಪಿ ಶಾಸಕರು ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಇಂತಹ ಆರೋಪಗಳನ್ನು ಕೇಳುವ ಬದಲು ಮುಖ್ಯಮಂತ್ರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಬರಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು