ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃಷಿ ಅಭಿವೃದ್ಧಿಗೆ ಮಹತ್ವದ ಹೆಜ್ಜೆ’

Last Updated 22 ಸೆಪ್ಟೆಂಬರ್ 2020, 13:35 IST
ಅಕ್ಷರ ಗಾತ್ರ

ಹಾವೇರಿ: ‘ರೈತರಿಗೆ ಮೋಸವೆಸಗುತ್ತಿದ್ದ ಮಧ್ಯವರ್ತಿಗಳು, ಖರೀದಿದಾರರ ಪರವಾಗಿದ್ದ ಪಕ್ಷಗಳು ‘ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ಮಸೂದೆ’ಯನ್ನು ವಿರೋಧಿಸುತ್ತಿವೆ.ಕೃಷಿ ಕ್ಷೇತ್ರದ ಸುಧಾರಣೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ಈ ನೂತನ ಮಸೂದೆ ಅನ್ವಯ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗಿಷ್ಟ ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡುವ ಸ್ವಾತಂತ್ರ್ಯವನ್ನು ನೀಡಲಾಗಿದೆ. ಪರ್ಯಾಯ ವ್ಯಾಪಾರ ವ್ಯವಸ್ಥೆ ಮೂಲಕ ಬೆಳೆಗಳ ನ್ಯಾಯಯುತ ದರ ನಿಗದಿಪಡಿಸಲು ನೆರವು ನೀಡಲಾಗಿದೆ. ಕೃಷಿ ಉತ್ಪನ್ನಗಳ ಪಾರದರ್ಶಕ, ತಡೆರಹಿತ ಅಂತರರಾಜ್ಯ ಹಾಗೂ ರಾಜ್ಯದೊಳಗಿನ ವ್ಯಾಪಾರಕ್ಕೆ ಉತ್ತೇಜನ ನೀಡಲಾಗಿದೆ ಎಂದು ಹೇಳಿದರು.

ಮೂರು ಕಾಯ್ದೆಗಳಿಗೆ ತಿದ್ದುಪಡಿಯನ್ನು ಸುಗ್ರೀವಾಜ್ಞೆಯ ಮೂಲಕ 5 ಜೂನ್ 2020ರಂದು ಮಾಡಲಾಗಿದ್ದು, ಈಗ ಎರಡೂ ಸದನಗಳ ಒಪ್ಪಿಗೆ ದೊರೆತಿರುವ ಸಂದರ್ಭದಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ನೀತಿ ನಿಯಮಗಳಿಗೆ ವಿರುದ್ಧವಾಗಿ ಕಾನೂನನ್ನು ಕೈಗೆತ್ತಿಕೊಂಡು ಕೋಲಾಹಲ ಸೃಷ್ಟಿಸಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ.

ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರೇಶ ಚಿನ್ನಣ್ಣವನರ ಹಾಗೂ ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT