ಭಾನುವಾರ, ಜೂನ್ 20, 2021
28 °C

ಹಾವೇರಿ: ಮೌನ ಪ್ರತಿಭಟನೆ ಆ. 15ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಭೂಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳು ರೈತ ವಿರೋಧಿಯಾಗಿದ್ದು, ಇವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಆ. 15ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಕಪ್ಪು ಪಟ್ಟಿ ಕಟ್ಟಿಕೊಂಡು ‘ಮೌನ ಪ್ರತಿಭಟನೆ’ ಮಾಡುತ್ತೇವೆ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಾವೇರಿ ತಿಳಿಸಿದರು. 

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಭೂಮಿ ನಮ್ಮದು, ನಮ್ಮ ಊರಿನೊಳಗೆ ಭೂಗಳ್ಳರಿಗೆ ಪ್ರವೇಶವಿಲ್ಲ ಎಂದು ಗ್ರಾಮಗಳಲ್ಲಿ ಫಲಕ ಹಾಕುತ್ತಿದ್ದೇವೆ. ಉಳುವವನೇ ಭೂ ಒಡೆಯ ಎಂಬುದು ಬದಲಾಗಿ ಉಳ್ಳವನೇ ಭೂ ಒಡೆಯ ಎಂಬಂತಾಗಲು ನಾವು ಅವಕಾಶ ಮಾಡಿಕೊಡುವುದಿಲ್ಲ. ಕೊರೊನಾ ತುರ್ತು ಸಂದರ್ಭದಲ್ಲಿ ಚರ್ಚೆಯನ್ನೇ ನಡೆಸದೆ, ತರಾತುರಿಯಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತರ ಬಾಳಿಗೆ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ವಿದ್ಯುತ್‌ ವಲಯ ಖಾಸಗೀಕರಣ ಮಾಡಿ, ಸ್ಮಾರ್ಟ್‌ ಮೀಟರ್‌ ಅಳವಡಿಸಿದರೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾರೆ. ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ತಿದ್ದುಪಡಿಗಳನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು. 

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಸುರೇಶ ಚಲವಾದಿ, ಜಗದೀಶ ಭಂಡಾರಿ, ಜಾನ್‌ ಪುನೀತ್‌, ಶಿವಪ್ಪ ಕುಳೇನೂರ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು