ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಬಿಡುಗಡೆಗೆ ಒತ್ತಾಯ

Published 22 ನವೆಂಬರ್ 2023, 14:39 IST
Last Updated 22 ನವೆಂಬರ್ 2023, 14:39 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಎಚ್.ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಅಹಿಂದ ವರ್ಗ ತಾಲ್ಲೂಕು ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬುಧವಾರ ತಹಶೀಲ್ದಾರ್ ಹನುಮಂತ ಶಿರಹಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಹನುಮಂತಪ್ಪ ಕಬ್ಬಾರ ಮಾತನಾಡಿ, ರಾಷ್ಟ್ರದಲ್ಲಿ ಮೀಸಲಾತಿ ಅವಕಾಶ ವಂಚಿತ ಜಾತಿಗಳಿಗೆ ನೀಡಿ ಸಾಮಾಜಿಕ ಸಮಾನತೆ ಸಾರಿದ ಅಗ್ರಗಣ್ಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಸಂವಿಧಾನದ ಆಶಯಗಳನ್ನು ಈಡೇರಿಸಿ ಅನೇಕ ಜಾತಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಕರ್ನಾಟಕದಲ್ಲಿ ಅನೇಕ ಯಶಸ್ವಿ ಪ್ರಯೋಗಗಳು ನಡೆದಿವೆ. ಅನೇಕ ಹಿಂದುಳಿದ ವರ್ಗಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿಯನ್ನು ಅಚ್ಚುಕಟ್ಟಾಗಿ ಜಾರಿ ಮಾಡಿದ್ದರೂ ರಾಜಕೀಯ ತೀರ್ಮಾನಗಳಿಂದಾಗಿ ಬಲಾಢ್ಯರು ಮೀಸಲಾತಿ ಪಡೆದು ಶೋಷಿತರ ಪಾಲನ್ನು ಕಬಳಿಸುತ್ತಿರುವುದು ಶೋಷನೀಯ ಎಂದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ರೀತಿಯಲ್ಲಿ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದು ಅಧಿಕಾರ ಹಿಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಶೀಘ್ರ ಘೋಷಣೆ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಷಣ್ಮುಖಪ್ಪ ಕಂಬಳಿ, ಮೃತ್ಯುಂಜಯ ಗುದಿಗೇರ, ಕಿರಣ ಗುಳೇದ, ಆನಂದ ಹುಲಬನ್ನಿ, ಪ್ರವೀಣ ಸಣ್ಣನೀಲಪ್ಪನವರ, ನಾಗರಾಜ ಐರಣಿ, ರಮೇಶ ಐರಣಿ, ಹೊನ್ನಪ್ಪ ಹಳ್ಳಿ, ಅಣ್ಣಪ್ಪ ಮೀಸೇರ, ಅಶೋಕ ಮೀಸೇರ, ಶಿವಾನಂದ ಅಸುಂಡಿ ಸಹದೇವಪ್ಪ ಅಸುಂಡಿ, ದೇವಿಂದ್ರಪ್ಪ ಮೀಸೇರ, ರಮೇಶ ಕರಡೆಣ್ಣನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT