ಸೋಮವಾರ, ಜೂನ್ 14, 2021
27 °C

ಆತ್ಮಸ್ಥೈರ್ಯ ಹೆಚ್ಚಿಸಲು ಪರಿಹಾರ ಪ್ಯಾಕೇಜ್‌ -ಸಿದ್ದರಾಜ ಕಲಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕೋವಿಡ್ ಎರಡನೇ ಅಲೆಯ ಪರಿಣಾಮ ರಾಜ್ಯದ ಜನತೆಯ ಆತ್ಮಸ್ಥೈರ್ಯ ಹೆಚ್ಚಿಸಲು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ₹1250 ಕೋಟಿ ಮೊತ್ತದ ಪ್ಯಾಕೇಜ್‌ ಘೋಷಿಸಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ತಿಳಿಸಿದ್ದಾರೆ. 

ಕಟ್ಟಡ ಕಾರ್ಮಿಕರಿಗೆ ₹3 ಸಾವಿರ, ಅಸಘಂಟಿತ ವಲುದ ಕಾರ್ಮಿಕರಿಗೆ ₹2 ಸಾವಿರ, ರಸ್ತೆ ಬದಿಯ ವ್ಯಾಪಾರಸ್ಥರಿಗೆ ₹2 ಸಾವಿರ, ಕಲಾವಿದರಿಗೆ ಹಾಗೂ ಕಲಾ ತಂಡದವರಿಗೆ ₹3 ಸಾವಿರ ಹಾಗೂ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ ಪ್ರದೇಶಕ್ಕೆ ₹10 ಸಾವಿರ ಹಾಗೂ ಆಟೊ ಟ್ಯಾಕ್ಸಿ ಚಾಲಕರಿಗೆ ₹3 ಸಾವಿರ ಘೋಷಿಸಿರುವ ಮೂಲಕ ಬಡವರ ಮತ್ತು ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. 

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ವ್ಯವಸ್ಥೆ ಕಲ್ಪಿಸುವ ಮೂಲಕ ರಾಜ್ಯದ ಜನರಿಗೆ ಬೆನ್ನಲುಬಾಗಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರ ಜನರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು