ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಕಾಶಕ್ಕಾಗಿ ಕಾಯಬೇಕು: ಸಚಿವ ಶ್ರೀರಾಮುಲು 

Last Updated 8 ಫೆಬ್ರುವರಿ 2020, 10:25 IST
ಅಕ್ಷರ ಗಾತ್ರ

ಹಾವೇರಿ: ನಮ್ಮ ನಾಯಕರಾದ ಬಿ.ಎಸ್‌.ಯಡಿಯೂರಪ್ಪ ಅವರು ಪಕ್ಷದಲ್ಲಿ ಯಾರನ್ನೂ ಕಡೆಗಣಿಸುವುದಿಲ್ಲ. ಅಸಮಾಧಾನಗೊಂಡವರನ್ನು ಸಮಾಧಾನ ಪಡಿಸುವ ಕೆಲಸವನ್ನು ಮಾಡಲಿದ್ದಾರೆ. ಅವಕಾಶಕ್ಕಾಗಿ ನಾವೆಲ್ಲರೂ ಕಾಯಬೇಕಿದೆ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ,ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಈಗಾಗಲೇ 73 ಮಂದಿಯ ರಕ್ತಪರೀಕ್ಷೆ ಮಾಡಲಾಗಿದ್ದು, ಎಲ್ಲರದೂ ‘ನೆಗೆಟಿವ್‌‘ ಫಲಿತಾಂಶ ಬಂದಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಬಂದರು, ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಕೇರಳದಿಂದ ಬಂದವರ ಮೇಲೂ ನಿಗಾ ಇಡಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 10 ಹಾಸಿಗೆಗಳನ್ನು ಮೀಸಲಿಟ್ಟಿದ್ದೇವೆ. ಜಿಲ್ಲೆಗೊಂದು ವಾಹನ ಬಿಟ್ಟಿದ್ದೇವೆ. ದಿನಕ್ಕೆ ನಾಲ್ಕು ಹಳ್ಳಿಗಳಿಗೆ ವಾಹನ ಹೋಗಲಿದೆ. ಶೀಘ್ರದಲ್ಲೇ ಹಾವೇರಿಗೂ ವಾಹನ ಬರಲಿದೆ ಎಂದು ಮಾಹಿತಿ ನೀಡಿದರು.

ಮಾರ್ಚ್‌ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಿರಿಯ ಮಗಳಾದ ಬಳ್ಳಾರಿ ರಕ್ಷಿತಾ ಅವರ ಮದುವೆ ಕಾರ್ಯಕ್ರಮವಿದೆ. ಹಾಗಾಗಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಆಹ್ವಾನ ನೀಡಲು ಬಂದಿದ್ದೇನೆ. ಮದುವೆ ಕಾರ್ಯಕ್ರಮ ಮುಗಿದ ನಂತರ,ಹಾವೇರಿ ಜಿಲ್ಲಾಸ್ಪತ್ರೆಗೆ ವಾಸ್ತವ್ಯಕ್ಕೆ ಬರಲಿದ್ದೇನೆ ಎಂದು ಹೇಳಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ‘ಎಂಐಆರ್‌ ಸ್ಕ್ಯಾನಿಂಗ್‌’ ಯಂತ್ರವನ್ನು ಅಳವಡಿಸಲು ಖಾಸಗಿ ಸಹಭಾಗಿತ್ವದಲ್ಲಿ ಯಾರಾದರೂ ಬಂದರೆ ಅವಕಾಶ ಕೊಡಿ. ಇಲ್ಲದಿದ್ದರೆ ಸರ್ಕಾರದ ವತಿಯಿಂದ ಯಂತ್ರ ಕೊಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಜೇಂದ್ರ ದೊಡ್ಡಮನಿ ಅವರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT