ಭಾನುವಾರ, ಆಗಸ್ಟ್ 1, 2021
26 °C

ಎಸ್ಸೆಸ್ಸೆಲ್ಸಿ: 161 ವಿದ್ಯಾರ್ಥಿಗಳು ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್.ಎಸ್.ಎಲ್.ಸಿ. ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ 20,269 ವಿದ್ಯಾರ್ಥಿಗಳು ಹಾಜರಾಗಿದ್ದರು. 

ಜಿಲ್ಲೆಯಲ್ಲಿ 20,430 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 161 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕಂಟೈನ್ಮೆಂಟ್ ವಲಯದಿಂದ ಬಂದಿದ್ದ 224 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. 21 ವಿದ್ಯಾರ್ಥಿಗಳು ಅನಾರೋಗ್ಯದ ನಿಮಿತ್ತ ವಿಶೇಷ ಕೊಠಡಿಯಲ್ಲಿ ಕುಳಿತು ಪರೀಕ್ಷೆ ಬರೆದರು. 

19,725 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾಗಿದ್ದರು. 459 ಖಾಸಗಿ ಹೊಸ ಅಭ್ಯರ್ಥಿಗಳ ಪೈಕಿ 388 ವಿದ್ಯಾರ್ಥಿಗಳು ಹಾಜರಾಗಿ, 71 ಮಕ್ಕಳು ಗೈರಾಗಿದ್ದರು. 77 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಲ್ಲಿ 62 ಮಕ್ಕಳು ಹಾಜರಾಗಿ, 15 ಮಕ್ಕಳು ಗೈರು ಹಾಜರಾಗಿದ್ದರು. ವಲಸೆ ಬಂದ 695 ವಿದ್ಯಾರ್ಥಿಗಳ ಪೈಕಿ, 692 ಮಕ್ಕಳು ಪರೀಕ್ಷೆ ಬರೆದರೆ, 3 ಮಕ್ಕಳು ಗೈರು ಹಾಜರಾಗಿದ್ದರು. ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು