ಬುಧವಾರ, ಆಗಸ್ಟ್ 12, 2020
22 °C

ಹಾವೇರಿ | ಎಸ್ಸೆಸ್ಸೆಲ್ಸಿ: 165 ವಿದ್ಯಾರ್ಥಿಗಳು ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲೆಯಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 165 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 

ಜಿಲ್ಲೆಯಲ್ಲಿ 20,369 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 20,204 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಂಟೈನ್ಮೆಂಟ್ ವಲಯದಿಂದ ಬಂದಿದ್ದ 248 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಅನಾರೋಗ್ಯ ಕಾರಣದಿಂದ 22 ವಿದ್ಯಾರ್ಥಿಗಳಿಗೂ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. 

459 ಖಾಸಗಿ ಹೊಸ ಅಭ್ಯರ್ಥಿಗಳ ಪೈಕಿ, 388 ಪರೀಕ್ಷೆ ಹಾಜರಾಗಿದ್ದರು. 71 ಮಕ್ಕಳು ಗೈರಾಗಿದ್ದರು. 67 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳ ಪೈಕಿ, 53 ಮಕ್ಕಳು ಹಾಜರಿದ್ದು, 14 ಮಕ್ಕಳು ಗೈರು ಹಾಜರಾಗಿದ್ದರು. 696 ವಲಸೆ ವಿದ್ಯಾರ್ಥಿಗಳಲ್ಲಿ 684 ಮಕ್ಕಳು ಹಾಜರಾಗಿದ್ದು, 5 ಮಕ್ಕಳು ಗೈರು ಹಾಜರಾಗಿದ್ದರು. ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.