ಹಾವೇರಿ: ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಬುಧವಾರದಿಂದ ಆರಂಭವಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

ಜಿಲ್ಲೆಯ 81 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಬುಧವಾರ ಬೆಳಿಗ್ಗೆ ನಿಗದಿತ ಸಮಯಕ್ಕೆ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳನ್ನು, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಹೂವು ನೀಡಿ ಸ್ವಾಗತಿಸಿದರು. ಜೊತೆಗೆ, ಪರೀಕ್ಷೆ ಬರೆಯಲು ಹುಮ್ಮಸ್ಸು ತುಂಬಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆ–1ರ ಪ್ರಥಮ ಭಾಷೆ ಪರೀಕ್ಷೆ ಬುಧವಾರ ನಡೆಯಿತು. ಈ ಪರೀಕ್ಷೆ ಬರೆಯಲು ಜಿಲ್ಲೆಯ 22,469 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 22,213 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿ, ಪರೀಕ್ಷೆ ಬರೆದರು. 256 ಮಂದಿ ಪರೀಕ್ಷೆಗೆ ಗೈರು ಹಾಜರಾದರು.

ಪರೀಕ್ಷೆ ಸುಗಮವಾಗಿ ನಡೆಯುವಂತೆ ಪೊಲೀಸರು ಭದ್ರತೆ ಕೈಗೊಂಡಿದ್ದರು. ಪರೀಕ್ಷೆ ಕೇಂದ್ರ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

‘ಪರೀಕ್ಷೆ ಆಯೋಜನೆ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದಲ್ಲಿ ಸಾಕಷ್ಟು ಸಭೆಗಳನ್ನು ಮಾಡಲಾಗಿತ್ತು. 81 ಕೇಂದ್ರಗಳಲ್ಲಿಯೂ ಸಕಲ ತಯಾರಿ ಮಾಡಿಕೊಳ್ಳಲಾಗಿತ್ತು. ಬುಧವಾರ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು, ಪರೀಕ್ಷೆ ಬರೆದರು’ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ದಂಡಿನ ಹೇಳಿದರು.

‘ಪ್ರತಿಯೊಂದು ಕೇಂದ್ರದಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿತ್ತು. ವೆಬ್ ಕಾಸ್ಟಿಂಗ್ ನಿಗಾದಲ್ಲಿ ಪರೀಕ್ಷೆಗಳು ನಡೆದವು. ಜಿಲ್ಲಾ ಪಂಚಾಯಿತಿಯಲ್ಲಿದ್ದ ನಿಯಂತ್ರಣ ಕೊಠಡಿಯಲ್ಲಿ ಕ್ಯಾಮೆರಾ ದೃಶ್ಯಗಳನ್ನು ವೀಕ್ಷಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಪರೀಕ್ಷೆಯಲ್ಲಿ ನಕಲು ಮಾಡಿದ ಬಗ್ಗೆ ಯಾವುದೇ ಪ್ರಕರಣಗಳು ವರದಿಯಾಗಲಿಲ್ಲ’ ಎಂದರು.

‘ಪರೀಕ್ಷೆ ನಡೆಯುವಾಗಲೇ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಲಾಯಿತು. ಯಾವುದೇ ಕೇಂದ್ರದಲ್ಲೂ ಅಕ್ರಮ ಹಾಗೂ ಅಹಿತಕರ ಘಟನೆಗಳು ನಡೆದಿಲ್ಲ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಇತರೆ ಅಧಿಕಾರಿಗಳು ಸಹ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು’ ಎಂದರು.

1151 ವಿದ್ಯಾರ್ಥಿಗಳು ಹಾಜರು: 11 ವಿದ್ಯಾರ್ಥಿಗಳು ಗೈರು

ರಟ್ಟೀಹಳ್ಳಿ: ತಾಲ್ಲೂಕಿನ ಒಟ್ಟು 4 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಯಾವುದೇ ತೊಂದರೆಯಿಲ್ಲದೆ ಸರಾಗವಾಗಿ ನಡೆದವು.

ತಾಲ್ಲೂಕು ಕೇಂದ್ರ ರಟ್ಟೀಹಳ್ಳಿ ತರಳುಬಾಳು ಆಂಗ್ಲ ಮಾದ್ಯಮ ಶಾಲೆ, ಶ್ರೀ ಕುಮಾರೇಶ್ವರ ಪ್ರೌಢಶಾಲೆ, ಹಳ್ಳೂರು ಗ್ರಾಮದ ಶ್ರೀ ರಂಗನಾಥ ಪ್ರೌಢಶಾಲೆ, ಮಾಸೂರು ಗ್ರಾಮದ ಬಿ.ಟಿ.ಪಾಟೀಲ ಪ್ರೌಢಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಮಾಡಲಾಗಿತ್ತು.

ರಟ್ಟೀಹಳ್ಳಿ ತರಳುಬಾಳು ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ 302 ವಿದ್ಯಾರ್ಥಿಗಳ ಪೈಕಿ 297 ವಿದ್ಯಾರ್ಥಿಗಳು ಪರೀಕ್ಷೆ ಬರೆದು 5 ವಿದ್ಯಾರ್ಥಿಗಳು ಗೈರುಗೊಂಡರು, ರಟ್ಟೀಹಳ್ಳಿ ಶ್ರೀ ಕುಮಾರೇಶ್ವರ ಪ್ರೌಢಶಾಲೆಯಲ್ಲಿ 313 ವಿದ್ಯಾರ್ಥಿಗಳ ಪೈಕಿ 309 ವಿದ್ಯಾರ್ಥಿಗಳು ಪರೀಕ್ಷೆ ಬರೆದು 4 ವಿದ್ಯಾರ್ಥಿಗಳು ಗೈರಾದರು.

ಹಳ್ಳೂರು ಶ್ರೀ ರಂಗನಾಥ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ 202 ವಿದ್ಯಾರ್ಥಿಗಳ ಪೈಕಿ 200 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 2 ವಿದ್ಯಾರ್ಥಿಗಳು ಗೈರಾದರು. ಮಾಸೂರಿನ ಬಿ.ಟಿ.ಪಾಟೀಲ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ 345 ವಿದ್ಯಾರ್ಥಿಗಳ ಪೈಕಿ 345 ವಿದ್ಯಾರ್ಥಿಗಳು ಪರೀಕ್ಷೆ ಬರೆದು ಯಾರೊಬ್ಬರು ಗೈರರಾಗಿರುವುದಿಲ್ಲ.

ತಾಲ್ಲೂಕಿನಲ್ಲಿ ಒಟ್ಟು 4 ಪರೀಕ್ಷಾ ಕೆಂದ್ರಗಳಲ್ಲಿ ಮೊದಲ ದಿನ ಭಾಷಾ ಪರೀಕ್ಷೆಯಲ್ಲಿ ಒಟ್ಟು 1151 ವಿದ್ಯಾರ್ಥಿಗಳು ಹಾಜರಾಗಿ, 11 ವಿದ್ಯಾರ್ಥಿಗಳು ಗೈರಾದರು. ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಶಿಕ್ಷಕರು, ಪಾಲಕರೊಂದಿಗೆ ಆಗಮಿಸಿ ತಮ್ಮ ಕೊಠಡಿ ಸಂಖ್ಯೆ ನೋಡಿಕೊಳ್ಳುವುದರಲ್ಲಿ ನಿರತರಾಗಿದ್ದರು. ಯಾವುದೇ ತೊಂದರೆಯಾಗದಂತೆ ಶಿಕ್ಷಣ ಇಲಾಖೆ ಅಗತ್ಯ ಕ್ರಮಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ ಬಂದೊಬಸ್ತ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಸುಸೂತ್ರವಾಗಿ ನಡೆದ ಪರೀಕ್ಷೆ

ಬ್ಯಾಡಗಿ: ಪಟ್ಟಣದ ಎಸ್ಜೆಜೆಎಂ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ ಎರಡು ಪರೀಕ್ಷಾ ಕೇಂದ್ರಗಳು ಸೇರಿದಂತೆ ತಾಲ್ಲೂಕಿನ ಛತ್ರ ಬಿಸಲಹಳ್ಳಿ ಶಿಡೇನೂರು ಕಾಗಿನೆಲೆ ಮತ್ತು ಚಿಕ್ಕಬಾಸೂರು ಪರೀಕ್ಷಾ ಕೇಂದ್ರಗಳಲ್ಲಿ ಮಾ.18ರಂದು ನಡೆದ ಪ್ರಥಮ ಭಾಷಾ ವಿಷಯದ ಮೊದಲ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆಯಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ.ಕೋಟಿ ತಿಳಿಸಿದರು. ಬುಧವಾರ ‘ಪ್ರಜಾವಾಣಿ‘ಯೊಂದಿಗೆ ಮಾತನಾಡಿದ ಅವರು ಇಂದಿನ ಪ್ರಥಮ ಭಾಷೆಯ ಮೊದಲ ಪರೀಕ್ಷೆಯಲ್ಲಿ ರೆಗ್ಯುಲರ್ ಪೈಕಿ ಮೂವರು ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಸೇರಿ ಒಟ್ಟು 12 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಯಲ್ಲಿ ಗೈರಾಗಿರುವುದು ಕಂಡು ಬಂದಿದೆ. ಒಟ್ಟಾರೆ 2264 ವಿದ್ಯಾರ್ಥಿಗಳ ಪೈಕಿ 2252 ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪರೀಕ್ಷೆಯನ್ನು ಎದುರಿಸಿದ್ದಾರೆ. ತಲಾ ಇಬ್ಬರು ಸದಸ್ಯರನ್ನು ಒಳಗೊಂಡ ತಹಶೀಲ್ದಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಬಿಇಒ ಅವರ ನೇತೃತ್ವದ ಜಾಗೃತ ದಳ ಪರೀಕ್ಷಾ ಕೃಂದ್ರಗಳಿಗೆ ಬೇಟಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.