ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಕಾರ್ಯಾಗಾರ 17ಕ್ಕೆ

Published 27 ಫೆಬ್ರುವರಿ 2024, 5:27 IST
Last Updated 27 ಫೆಬ್ರುವರಿ 2024, 5:27 IST
ಅಕ್ಷರ ಗಾತ್ರ

ರಾಣೆಬೆನ್ನೂರು: ಇಲ್ಲಿನ ಸಿದ್ದೇಶ್ವರ ಗ್ರಾಮೀಣ ವಸತಿ ಪ್ರೌಢಶಾಲೆ ಆವರಣದಲ್ಲಿ ಜ. 17 ರಂದು ಬೆಳಿಗ್ಗೆ 10:30 ಗಂಟೆಗೆ, 2022 23ನೇ ಸಾಲಿನ  ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಉಚಿತ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ ನಡೆಯಲಿದೆ.

ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಕರವೇ ಕನ್ನಡ ಸೇನೆ, ಮತ್ತು ಶ್ರೀ ಸಿದ್ದೇಶ್ವರ ಗ್ರಾಮೀಣ ವಸತಿ ಪ್ರೌಢ ಶಾಲೆ ಸಹಯೋಗದಲ್ಲಿ ಕಾರ್ಯಾಗಾರ ನಡೆಯಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹೆಚ್. ಪಾಟೀಲ್ ಉದ್ಘಾಟಿಸುವರು, ವಸತಿ ಪ್ರೌಢಶಾಲಾ ಸಮಿತಿಯ ಅಧ್ಯಕ್ಷ ರಾಯಣ್ಣ ಮಾಕನೂರು ಅಧ್ಯಕ್ಷತೆ ವಹಿಸುವರು.

ದಾವಣಗೆರೆ ಕಲಾಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಗಣೇಶ್ ಶೆಣೈ ಅವರು ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ, ಕನ್ನಡ ಸೇನೆ ಅಧ್ಯಕ್ಷ ಪರಮೇಶ್ವರಯ್ಯ ಮಠದ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಶಾಂತ್ ಮಾಸಣಗಿ, ಬಸವರಾಜ ಬಾಗೇವಾಡಿಮಠ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT