ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಟಿ. ಮೀಸಲಾತಿ ಹೆಚ್ಚಿಸಲು ಆಗ್ರಹ

Last Updated 21 ಸೆಪ್ಟೆಂಬರ್ 2020, 11:50 IST
ಅಕ್ಷರ ಗಾತ್ರ

ಹಾವೇರಿ: ‘ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ ಶೇ 7.5ಕ್ಕೆ ಹೆಚ್ಚಿಸಲು ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಗ್ರಹಿಸುತ್ತೇನೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಆನವಟ್ಟಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾ.ನಾಗಮೋಹನ ದಾಸ ಸಮಿತಿಯು ಸರ್ಕಾರಕ್ಕೆ ವರದಿ ನೀಡಿ ಮೀಸಲಾತಿಯನ್ನು ಹೆಚ್ಚಿಸಬಹುದು ಎಂದು ಶಿಫಾರಸು ಮಾಡಿದೆ. ಸರ್ಕಾರಗಳು ಪರಿಶಿಷ್ಟ ಪಂಗಡಕ್ಕೆ ಸಮರ್ಪಕ ಮೀಸಲಾತಿ ನೀಡದ ಕಾರಣ ಶಿಕ್ಷಣ, ಉದ್ಯೋಗ, ಸಾಮಾಜಿಕ ಮತ್ತು ಆರ್ಥಿಕವಾಗಿ ಅನ್ಯಾಯವಾಗುತ್ತಿದೆ. ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಿದರೂ ಪ್ರಯೋಜವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್‌ಟಿ ಕ್ಷೇತ್ರದಿಂದ ಆಯ್ಕೆಯಾದ ಜನಪ್ರತಿನಿಧಿಗಳು ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡುತ್ತಿಲ್ಲ. ಸಮಾಜದ ಬಗ್ಗೆ ಇವರಿಗೆ ಕಳಕಳಿ ಇದ್ದರೆ ರಾಜೀನಾಮೆ ನೀಡಿ ಸಮುದಾಯದ ಪರ ನಿಲ್ಲಬೇಕು ಇಲ್ಲವೇ ವಿಧಾನಸಭೆ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಚಂದ್ರಣ್ಣ ಬೇಡರ, ಶ್ರೀಧರ ದೊಡ್ಡಮನಿ, ಅಶೋಕ ಹರನಗೆರೆ, ಶೇಖರ್‌ ಕಳ್ಳಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT