ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃಷಿ ಅಭಿವೃದ್ಧಿಗೆ ದೃಢ ಹೆಜ್ಜೆ’

ಜಿಲ್ಲಾ ರೈತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ
Last Updated 9 ಮೇ 2022, 15:32 IST
ಅಕ್ಷರ ಗಾತ್ರ

ಹಾವೇರಿ: ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಪರಿಣಾಮವಾಗಿ ದೇಶದ ಜಿ.ಡಿ.ಪಿಯಲ್ಲಿ ರೈತರ ಪಾಲು ಶೇ 11ರಿಂದ ಶೇ 17ಕ್ಕೆ ಏರಿಕೆಯಾಗಿದೆ’ ಎಂದುಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಹಾವೇರಿ ನಗರದ ಅಶೋಕ ಹೋಟೆಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

2022-2023ರ ಆಯವ್ಯಯದಲ್ಲಿ ಕೃಷಿ ಖಾತೆಗೆ ₹1.32 ಲಕ್ಷ ಕೋಟಿ ಅನುದಾನ ಹಂಚಿಕೆ ಮಾಡುವ ಮೂಲಕ ಕೃಷಿ ಕ್ಷೇತ್ರವನ್ನು ಒಂದು ಉದ್ಯಮವಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ದೃಢವಾದ ಹೆಚ್ಚೆಯನ್ನು ಇರಿಸಿದೆ. ಕೃಷಿ ಕ್ಷೇತ್ರ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ರೈತರಿಗೆ ಇದರ ಲಾಭವನ್ನು ತಲುಪಿಸಲು ಕಾರ್ಯಕರ್ತರು ಶ್ರಮವಹಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ ಮಾತನಾಡಿ, ‘ದೇಶದ ಶೇಕಡಾ 48 ಜನ ಕೃಷಿಯನ್ನು ಅವಲಂಬಿಸಿದ್ದು ಅಂತಹ ಕೃಷಿಕರನ್ನು ಪಕ್ಷದಲ್ಲಿ ಪ್ರತಿನಿಧಿಸುವ ಅವಕಾಶ ರೈತ ಮೋರ್ಚಾದ ಪದಾಧಿಕಾರಿಗಳಿಗೆ ಲಭಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಪರ ಯೋಜನೆಗಳನ್ನು ರೈತರಿಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆಯನ್ನು ಸದೃಢಗೊಳಿಸಬೇಕಾಗಿದೆ ಎಂದು ಕೋರಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿದರು.ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ರಾಷ್ಟ್ರೀಯ ಪರಿಷತ್ ಸದಸ್ಯರಾದ ಶಶಿಮೌಳಿ ಕುಲಕರ್ಣಿ, ರುದ್ರೇಶ ಚಿನ್ನಣ್ಣನವರ, ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು, ಮಂಡಲ ರೈತ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಮಲ್ಲಿಕಾರ್ಜುನ ಅಂಗಡಿ ನಿರೂಪಿಸಿದರು, ವಿಜಯಕುಮಾರ ಚಿನ್ನಿಕಟ್ಟಿ ಸ್ವಾಗತಿಸಿದರು. ಹನಮಂತಪ್ಪ ತಳವಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT