ಸೋಮವಾರ, ಏಪ್ರಿಲ್ 6, 2020
19 °C

ಮೆಗಾ ಡೇರಿ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ‘ಮೆಗಾ ಡೇರಿ’ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. 

ಹಾನಗಲ್ ತಾಲ್ಲೂಕಿನ ಬಾಳಂಬೀಡ ಗ್ರಾಮದಲ್ಲಿ ಬಾಳಂಬೀಡ ಮತ್ತು ಹಿರೇಕಾಂಶಿ ಸೇರಿದಂತೆ 239 ಕೆರೆಗಳಿಗೆ ₹504 ವೆಚ್ಚದಲ್ಲಿ ವರದಾ ನದಿಯಿಂದ ನೀರು ತುಂಬಿಸುವ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಸೋಮವಾರ ಅವರು ಮಾತನಾಡಿದರು.

ಮುಖ್ಯಮಂತ್ರಿ ಭಾಷಣ ಮುಗಿದ ಕೂಡಲೇ ವೇದಿಕೆಯಲ್ಲಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಚೀಟಿ ಕೊಟ್ಟು ಇದೊಂದು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು. ರಾಜ್ಯದ ಹಣಕಾಸು ಪರಿಸ್ಥಿತಿ ನೋಡಿಕೊಂಡು ಮಾಡೋಣ ಎಂದು ಸಿ.ಎಂ. ಉತ್ತರಿಸಿದರು. ಆದರೆ, ಬೊಮ್ಮಾಯಿ ದಯಮಾಡಿ ಘೋಷಣೆ ಮಾಡಿ ಎಂದರು. ಆಗ ಬಿ.ಎಸ್‌.ಯಡಿಯೂರಪ್ಪ ಅವರು ಘೋಷಣೆ ಮಾಡಿದರು. ಸಭಿಕರಿಂದ ಮುಗಿಲುಮುಟ್ಟುವ ಕರತಾಡನ ಕೇಳಿಬಂತು. 

‘ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಲು ಕೆ.ಎಂ.ಎಫ್‌.ನಿಂದ ಅನುಮತಿ ಸಿಕ್ಕಿದೆ. ಹಾಲು ಒಕ್ಕೂಟ ಸ್ಥಾಪನೆಗೂ ಮುನ್ನ ಮೂಲಸೌಕರ್ಯ ಕಲ್ಪಿಸುವುದು ಅವಶ್ಯ. ಈ ನಿಟ್ಟಿನಲ್ಲಿ ₹ 100 ಕೋಟಿ ವೆಚ್ಚದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಸ್ಕರಣಾ ಘಟಕ ಸ್ಥಾಪನೆಗೆ ಸಿ.ಎಂ. ಭರವಸೆ ನೀಡಿದ್ದಾರೆ. ಗಾಂಧಿಪುರದಲ್ಲಿರುವ ಶೀತಲೀಕರಣ ಘಟಕದ ಜಾಗದಲ್ಲೇ ‘ಮೆಗಾ ಡೇರಿ’ ಸ್ಥಾಪಿಸಲಾಗುವುದು ಎಂದು ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು