ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕ ಪದ್ಧತಿ ನಿವಾರಣೆಗೆ ಶ್ರಮಿಸಿ: ಹಿರಿಯ ಸಿವಿಲ್ ನ್ಯಾಯಾಧೀಶ ಪುಟ್ಟರಾಜು

ಬೀದಿನಾಟಕ ಉದ್ಘಾಟನೆ
Last Updated 9 ನವೆಂಬರ್ 2021, 13:03 IST
ಅಕ್ಷರ ಗಾತ್ರ

ಹಾವೇರಿ: ಉಚಿತ ಮತ್ತು ಕಡ್ಡಾಯ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ಬಾಲಕಾರ್ಮಿಕ ಪದ್ಧತಿ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.

ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಮಂಗಳವಾರ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅಮೃತ ಮಹೋತ್ಸವ ಹಾಗೂ ಕಾನೂನು ಸೇವೆಗಳ ಸಪ್ತಾಹದ ಅಂಗವಾಗಿ ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಭಿಕ್ಷಾಟಣೆ ನಿರ್ಮೂಲನೆ ಕುರಿತು ಹಮ್ಮಿಕೊಂಡಿದ್ದ ಬೀದಿನಾಟಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿ ಕಂಡು ಬಂದರೆ ತಕ್ಷಣ ಮಕ್ಕಳ ರಕ್ಷಣಾ ಘಟಕ ಅಥವಾ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.

ಕೆ.ಆರ್ ಹಿರೇಮಠ ಹಾಗೂ ತಂಡದ ಸದಸ್ಯರು ಬಾಲಕಾರ್ಮಿಕ ಪದ್ಧತಿಯ ದುಷ್ಟರಿಣಾಮಗಳು, ಪಾಲಕರು ಭಿಕ್ಷಾಟನೆಗೆ ಪ್ರಚೋದಿಸಿದರೆ ಇರುವ ಶಿಕ್ಷೆಗಳ ಬಗ್ಗೆ ಅರಿವು, ಶಿಕ್ಷಣದ ಮಹತ್ವ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಿದರು.

ಜೆ.ಎಚ್.ಪಟೇಲ್ ವೃತ್ತದಿಂದ ಪ್ರಾರಂಭವಾದ ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳ ಮೂಲಕ ಮೈಲಾರ ಮಹಾದೇವಪ್ಪ ಸರ್ಕಲ್‍ವರೆಗೆ ಜರುಗಿತು.

ಬಾಲ ಕಾರ್ಮಿಕ ಪದ್ಧತಿ ನಿಷೇಧ ಹಾಗೂ ಮಕ್ಕಳ ಭಿಕ್ಷಾಟನೆ ನಿರ್ಮೂಲನೆ ಕುರಿತ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಲ್ಲಿಕಾರ್ಜುನ ಮಠದ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್‌, ಶಹರ ಪೊಲೀಸ್ ಠಾಣೆ ಸಿಪಿಐ ಪ್ರಹ್ಲಾದ ಚನ್ನಗಿರಿ, ಮುನ್ಸಿಪಲ್ ಹೈಸ್ಕೂಲ್ ಮುಖ್ಯೋಪಾಧ್ಯೆ ಶೋಭಾ ಜಾಘಟಗೇರಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT