ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ಸಾಹಿತ್ಯ ಸಮ್ಮೇಳನ: ಹಿಂದಿ ಹೇರಿಕೆಗೆ ತೀವ್ರ ಖಂಡನೆ- ಐದು ನಿರ್ಣಯಗಳು

ಹಾವೇರಿ ಸಾಹಿತ್ಯ ಸಮ್ಮೇಳನ: ‘ಬಹಿರಂಗ ಅಧಿವೇಶನ’ದ 6 ನಿರ್ಣಯಗಳಿಗೆ ಅನುಮೋದನೆ
Last Updated 9 ಜನವರಿ 2023, 3:08 IST
ಅಕ್ಷರ ಗಾತ್ರ

ಕನಕ–ಶರೀಫ–ಸರ್ವಜ್ಞ ವೇದಿಕೆ (ಹಾವೇರಿ): ಹಿಂದಿ ಹೇರಿಕೆಗೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ, 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ಹಿಂದಿ ಅಥವಾ ಇನ್ಯಾವುದೇ ಭಾಷೆಯ ಆಕ್ರಮಣ ಮತ್ತು ಹೇರಿಕೆಯನ್ನು ಖಂಡಿಸುವುದಾಗಿ ನಿರ್ಣಯ ಕೈಗೊಳ್ಳಲಾಯಿತು.

ಭಾನುವಾರ ನಡೆದ ಸಮ್ಮೇಳನದ ‘ಬಹಿರಂಗ ಅಧಿವೇಶನ’ದ ಸಭೆಯಲ್ಲಿ ಸರ್ವಾನುಮತದೊಂದಿಗೆ 6 ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕಸಾಪದ ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲ್‌ ಪಾಂಡು ನಿರ್ಣಯಗಳನ್ನು ಮಂಡಿಸಿದರು.

ನಿರ್ಣಯಗಳು:

1. ‘ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕ’ ಕೂಡಲೇ ಸುಗ್ರೀವಾಜ್ಞೆ ಮೂಲಕ ಕಾನೂನಿನ ರೂಪ ಪಡೆದು ಶಿಕ್ಷಣ, ನ್ಯಾಯಾಂಗ, ಆಡಳಿತದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹ.

2. ಭಾರತದ ಸಂವಿಧಾನದ ಎಂಟನೇ ಪರಿಚ್ಛೇದದ ಅನ್ವಯ ಎಲ್ಲಾ ಪ್ರಾಂತೀಯ ಭಾಷೆಗಳನ್ನು ಸಮಾನ ಎಂದು ಗುರುತಿಸಿದ್ದು, ಈ ಪಟ್ಟಿಯಲ್ಲಿರುವ 22 ಭಾಷೆಗಳಲ್ಲಿ ‘ಕನ್ನಡ’ ಕರ್ನಾಟಕದ ಸಾರ್ವಭೌಮ ಭಾಷೆ. ಇದರ ಮೇಲೆ ಹಿಂದಿ ಅಥವಾ ಇನ್ಯಾವುದೇ ಭಾಷೆಯ ಆಕ್ರಮಣ ಹಾಗೂ ಹೇರಿಕೆಯನ್ನು ಈ ಸಮ್ಮೇಳನ ತೀವ್ರವಾಗಿ ಖಂಡಿಸುತ್ತದೆ.

3. ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಇರುವ ಮಹಾಜನ ವರದಿಯು, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿ ಇರುವುದರಿಂದ, ನ್ಯಾಯಾಲಯದ ಅಂತಿಮ ತೀರ್ಪಿನ ಮಾರ್ಗದರ್ಶನದಂತೆ ಸೂಕ್ತ ಕ್ರಮವನ್ನು ವಿಳಂಬವಿಲ್ಲದೇ ಕೈಗೊಳ್ಳಬೇಕು.

4. ಕನ್ನಡಕ್ಕಾಗಿ ಹೋರಾಡಿದ ಕನ್ನಡ ಚಳಿವಳಿಗಾರರ ಮೇಲಿನ ಈ ಸಂಬಂಧಿತ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಕೂಡಲೆ ಹಿಂಪಡೆಯಬೇಕು.

5. ‘ವಿಶ್ವ ಕನ್ನಡ ಸಮ್ಮೇಳನ’ವನ್ನು ದಾವಣಗೆರೆಯಲ್ಲಿ ನಡೆಸಬೇಕೆನ್ನುವ ನಿರ್ಣಯವನ್ನು ಸರ್ಕಾರ ತೆಗೆದುಕೊಂಡಿದ್ದು ಅದನ್ನು ‘ಕನ್ನಡ ಸಾಹಿತ್ಯ ಪರಿಷತ್‌’ ಸಹಯೋಗದೊಂದಿಗೆ ಜರುಗಿಸಬೇಕು ಮತ್ತು ನಿಯೋಜಿತ ಸಮ್ಮೇಳನದ ಸಂಬಂಧ ಸರ್ಕಾರ ನಡೆಸುವ ಸಭೆಗಳಲ್ಲಿ ಕಸಾಪವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒಕ್ಕೊರಲಿನ ಆಗ್ರಹ.

6. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಡಳಿತ,ಎಲ್ಲ ಕಾರ್ಯಕರ್ತರಿಗೂ ಮತ್ತು ಆತಿಥ್ಯ ನೀಡಿದ ಹಾವೇರಿಯ ಸಮಸ್ತರಿಗೂ ಮಹಾಸಭೆಯು ಕೃತಜ್ಞತೆ ಸಲ್ಲಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT