ಶನಿವಾರ, ಆಗಸ್ಟ್ 13, 2022
26 °C

ದೇವನಹಳ್ಳಿ: ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕನಕಶ್ರೀ ಪಿ.ಯು. ಕಾಲೇಜಿನ ಆವರಣದಲ್ಲಿರುವ ಕೃಷಿ ಹೊಂಡಕ್ಕೆ ಭಾನುವಾರ ವಿದ್ಯಾರ್ಥಿಯೊಬ್ಬ ಬಿದ್ದು ಮೃತಪಟ್ಟಿದ್ದಾನೆ.

ಹಾವೇರಿಯ ಹನುಮಂತು (17) ಮೃತ ಯುವಕ. 25 ದಿನಗಳ ಮುನ್ನ ಕಾಲೇಜಿಗೆ ದಾಖಲಾಗಿ, ಕಾಲೇಜು ಆವರಣದಲ್ಲಿದ್ದ ವಸತಿ ನಿಲಯದಲ್ಲಿ ತಂಗಿದ್ದ. ಆತ ಬಟ್ಟೆ ತೊಳೆಯಲು ಕೃಷಿ ಹೊಂಡಕ್ಕೆ ಹೋದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತರ ಪಾರ್ಥಿವ ಶರೀರವನ್ನು ಪಟ್ಟಣದ ಆಕಾಶ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕಾಲೇಜು ಆಡಳಿತ ಮಂಡಳಿಯಿಂದ ಪೋಷಕರಿಗೆ ಮಾಹಿತಿ ನೀಡಲಾಗಿದೆ. ದೇವನಹಳ್ಳಿ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ.

*

ವಿದ್ಯಾರ್ಥಿಯೂ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಆತನ ರಕ್ಷಣೆಗೆ ಸಹಪಾಠಿಗಳು ಮುಂದಾಗಿದ್ದರೂ ಕಾರ್ಯಾಚರಣೆ ವಿಫಲವಾಗಿದೆ. ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ವಸತಿ ನಿಲಯದ ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
-ಉಮೇಶ್‌, ಕನಕ ಶ್ರೀ ವಿದ್ಯಾಸಂಸ್ಥೆ

*

ಘಟನೆ ಕುರಿತು ಗಮನಕ್ಕೆ ಬಂದಿದ್ದು, ಕಾಲೇಜಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ರಾಮಕೃಷ್ಣಯ್ಯ, ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂ. ಗ್ರಾಮಾಂತರ ಜಿಲ್ಲೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು