ಶಿಗ್ಗಾವಿ: ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಚೇರಿಗಳ ಸಂಕೀರ್ಣದ ಮುಂದೆ ಬುಧವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ವಿಶ್ವನಾಥ್ ತತ್ತಿ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಳೆದ 13 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಅದರಲ್ಲಿ ಸುಮಾರು 170 ವಿದ್ಯಾರ್ಥಿಗಳಿದ್ದಾರೆ. ಈವರೆಗೆ ಮೂಲಭೂತ ಸೌಕರ್ಯಕ್ಕಾಗಿ ಪರದಾಡುತ್ತಿದ್ದಾರೆ.

ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಬೆಡ್, ಕಾಟುಗಳು ಇಲ್ಲ. ಊಟದ ಹಾಲ್ ಅತೀ ಚಿಕ್ಕದಾಗಿದೆ. ಇಲ್ಲ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ ಈವರೆಗೆ ಕಂಪ್ಯೂಟರ್ ಲ್ಯಾಬ್ ಇಲ್ಲ. ಸದ್ಯ ನಿರ್ಮಾಣವಾಗುತ್ತಿರುವ ಹಾಸ್ಟೆಲ್ ಕಟ್ಟಡವು ಪಟ್ಟಣದಿಂದ ಸುಮಾರು 7 ಕಿ.ಮೀ ಅಂತರದಲ್ಲಿದೆ. ಅದರಲ್ಲೂ ಅದನ್ನು ಗುಡ್ಡದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಅದರ ಮುಂದೆ ಸ್ಮಶಾನವಿದೆ. ಅದರಿಂದ ವಿದ್ಯಾರ್ಥಿಗಳು ಭಯಪಡುವಂತಾಗಿದೆ. ಅಲ್ಲದೆ ಕಾಡು, ಅರಣ್ಯ ಪ್ರದೇಶವಿರುವ ಕಾರಣ ಪ್ರಾಣಿಗಳ ಹಾವಳಿ ಇದೆ. ಹೀಗಾಗಿ ತಕ್ಷಣ ಸ್ಥಳ ಬದಲಾವಣೆ ಮಾಡಿ ನೂತನ ವಸತಿ ನಿಲಯದ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.

ಶಿರಸ್ತೇದಾರ್ ವಿಶ್ವನಾಥ್ ತತ್ತಿ ಭೇಟಿ ನೀಡಿ ಮಾತನಾಡಿ, ಪ್ರಸ್ತುತ ಇರುವ ಹಾಸ್ಟೆಲ್ನಲ್ಲಿ ಕಾಟು, ಊಟದ ಹಾಲ್, ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ ಮಾಡುತ್ತೇವೆ. ಆದರೆ ಈಗಾಗಲೇ ಸರ್ಕಾರದಿಂದ ಮಂಜೂರಿಯಾದ ಹಾಸ್ಟೆಲ್ ಕಟ್ಟಡವು ನಿರ್ಮಾಣದ ಹಂತದಲ್ಲಿದ್ದು ಅದನ್ನು ಬದಲಿಸಲು ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳು ಪ್ರಯತ್ನ ಮಾಡುತ್ತಾರೆ. ಅದಕ್ಕೆ ಇನ್ನೂ ಕಾಲಾವಕಾಶ ಬೇಕು. ಉಳಿದ ಸೌಕರ್ಯಕ್ಕಾಗಿ ವ್ಯವಸ್ಥೆ ಮಾಡಿಸುತ್ತೇನೆ ಎಂದು ಸೂಕ್ತ ಭರವಸೆ ನೀಡಿದರೂ ಸಹ ಅದಕ್ಕೆ ಒಪ್ಪದ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮುಂದುವರೆಸಿದರು.

ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರಶಾಂತ್ ವಾರಗಪ್ಪನವರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಈಗಾಗಲೇ ಶಿರಸ್ತೇದಾರ್ ವಿಶ್ವನಾಥ್ ತತ್ತಿ ಎಲ್ಲ ತಿಳಿಸಿದ್ದಾರೆ. ಅದರಂತೆ ಕೆಲವು ಸೌಲಭ್ಯಗಳನ್ನು ಸದ್ಯ ಇರುವ ಕಟ್ಟಡದಲ್ಲಿ ವಾರದಲ್ಲಿ ನೀಡುತ್ತೇವೆ. ಪಟ್ಟಣದಲ್ಲಿ ಹಳೆ ಬಸ್ ನಿಲ್ದಾಣದ ಎದುರು ಇರುವ ರಿ ಸ ನಂ 220/ಬ ಕ್ಷೇತ್ರ 29 ಗುಂಟೆ ತಾಲ್ಲೂಕು ಪಂಚಾಯಿತಿ ಧರ್ಮಶಾಲೆ ಖುಲ್ಲಾ ಜಾಗೆ ಅಥವಾ ತಾಲ್ಲೂಕು ಪಂಚಾಯಿತಿ ವ್ಯಾಪ್ತಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಪಕ್ಕದಲ್ಲಿ ಅಥವಾ ಎದುರುಗಡೆ ಇರುವ ನಿವೇಶನ ಹಾಗೂ ಶಿಗ್ಗಾವಿ ಪುರಸಭೆ ವ್ಯಾಪ್ತಿ ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಸರ್ಕಾರ ಅನುಮತಿ ನಂತರ ಪಟ್ಟಣದಲ್ಲಿಯೇ ಮೆಟ್ರಿಕ್ ನಂತರದ ವಸತಿ ನಿಲಯದ ಕಟ್ಟಡವನ್ನು ನಿರ್ಮಿಸಿ ಕೊಡುತ್ತೇವೆ ಎಂಬ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ ಅವರಿಂದ ಲಿಖಿತ ರೂಪದಲ್ಲಿ ಬರೆಯಿಸಿಕೊಂಡು ಪ್ರತಿಭಟನೆ ಹಿಂಪಡೆದರು.

ಪಿಎಸ್ಐ ಯಲ್ಲಪ್ಪ ಹಿರಗಪ್ಪನವರ, ಹುಲಗೂರ ಪಿಎಸ್ಐ ಪರಶುರಾಮ ಕಟ್ಟಿಮನಿ ಹಾಗೂ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.