ಶುಕ್ರವಾರ, ಫೆಬ್ರವರಿ 21, 2020
17 °C

ಹಾವೇರಿ: ಸಿಂದಗಿ ಮಠದ ವಿದ್ಯಾರ್ಥಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಇಲ್ಲಿನ ಸಿಂದಗಿಮಠದ ಸಂಸ್ಕೃತ ವಿದ್ಯಾರ್ಥಿ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕು ಮಮ್ಮಿಗಟ್ಟಿ ಗ್ರಾಮದ ಕುಮಾರಸ್ವಾಮಿ ಗಂಗಯ್ಯ ಸುರಗಿಮಠ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. 

‘ಅಪ್ಪನ ಕುಡಿತದ ಬಗ್ಗೆ ಬೇಸರ ಮಾಡಿಕೊಂಡಿದ್ದ ಕುಮಾರಸ್ವಾಮಿ, ತನ್ನ ಸಹಪಾಠಿ ಮತ್ತು ಸ್ನೇಹಿತರೊಂದಿಗೆ ಈ ಬಗ್ಗೆ ಹೇಳಿಕೊಂಡಿದ್ದ. ತೀವ್ರ ಮನನೊಂದು ಸೋಮವಾರ ಮಧ್ಯಾಹ್ನ ತನ್ನ ಸಹಪಾಠಿಗಳು ಊಟಕ್ಕೆ ಹೋದ ಸಮಯದಲ್ಲಿ ಮಠದ ಆವರಣದಲ್ಲಿರುವ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು