ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್: ಪಿಯು ವಿದ್ಯಾರ್ಥಿ ಆತ್ಮಹತ್ಯೆ

Published 29 ನವೆಂಬರ್ 2023, 15:30 IST
Last Updated 29 ನವೆಂಬರ್ 2023, 15:30 IST
ಅಕ್ಷರ ಗಾತ್ರ

ಹಾನಗಲ್: ಹಾನಗಲ್ ಎನ್‌ಸಿಜೆ ಕಾಲೇಜಿನ ಪಿಯು ವಿದ್ಯಾರ್ಥಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.

ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದೆ ಅವರು ಮೃತಪಟ್ಟಿದ್ದಾರೆ.

ಡೊಳ್ಳೇಶ್ವರ ಗ್ರಾಮದ ಅಜ್ಜಿಯ ಮನೆಯಲ್ಲಿ ವಾಸವಿದ್ದ ಈ ವಿದ್ಯಾರ್ಥಿಯ ಮೂಲ ಹಾವೇರಿ ಎಂದು ತಿಳಿದುಬಂದಿದೆ.

‘ಕಾಲೇಜಿನ ಪ್ರಾಚಾರ್ಯರು ನಿಂದಿಸಿ ಅವಮಾನಿಸಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‘ ಎಂದು ವಿದ್ಯಾರ್ಥಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT