ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯಕ್ಕೊಳಗಾಗುವ ಬಾಲಕರಿಗೂ ನ್ಯಾಯ ಒದಗಿಸಿ, ಲಿಂಗ ಸಮಾನತೆ ತರಲು ‘ಪೋಕ್ಸೊ’ ತಿದ್ದುಪಡಿಗೆ ಚಿಂತನೆ

Last Updated 28 ಏಪ್ರಿಲ್ 2018, 11:58 IST
ಅಕ್ಷರ ಗಾತ್ರ

ನವದೆಹಲಿ: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಬಾಲಕರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೋಕ್ಸೊ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ತಿಳಿಸಿದೆ.

12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಎಸಗುವ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಪೂರಕವಾದ ಸುಗ್ರೀವಾಜ್ಞೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಅನುಮೋದನೆ ನೀಡಿ, ಅದಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತವನ್ನೂ ಹಾಕಿದ್ದಾರೆ. ಇದರ ಬೆನ್ನಲ್ಲೇ, ಬಾಲಕರ ರಕ್ಷಣೆಗೆ ಪೂರಕವಾದ ಪೋಕ್ಸೊ ಕಾಯ್ದೆ ತಿದ್ದುಪಡಿ ತರುತ್ತಿದೆ.

‘ಸರ್ಕಾರ ಸದಾ ಲಿಂಗ ಸಮಾನತೆಯ ಕಾನೂನುಗಳನ್ನು ಜಾರಿಗೆ ತರಲು ಶ್ರಮಿಸುತ್ತದೆ. ಆದ್ದರಿಂದ ಪೋಕ್ಸೊ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವನೆ ಇದೆ’ ಎಂದು ಸರ್ಕಾರದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT