ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಣ್ಣ ಉದ್ಯಮದಿಂದ ಯಶಸ್ಸು’

Last Updated 7 ನವೆಂಬರ್ 2020, 15:49 IST
ಅಕ್ಷರ ಗಾತ್ರ

ಹಾವೇರಿ: ‘ಪ್ರಸ್ತುತ ದಿನಗಳಲ್ಲಿ ಉದ್ಯಮಶೀಲತಾ ಕೌಶಲಾಭಿವೃದ್ಧಿ ತರಬೇತಿಗಳು ಅತ್ಯವಶ್ಯವಾಗಿವೆ. ಸಣ್ಣ ಪ್ರಮಾಣದಲ್ಲಿ ಉದ್ಯಮವನ್ನು ಪ್ರಾರಂಭಿಸಿ ಉತ್ತಮ ಯಶಸ್ಸು ಕಾಣಬಹುದು’ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಹೇಳಿದರು.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಹಾವೇರಿ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಸಹಯೋಗದಲ್ಲಿ ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‍ನಲ್ಲಿ ‘30 ದಿನಗಳ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‌ವರ್ಕಿಂಗ್‌ ಉದ್ಯಮಶೀಲತಾ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ’ದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಉದ್ಯಮದಾರರು ಎದುರಿಸಬೇಕಾದ ಪ್ರಮುಖ ವಿಚಾರಗಳ ಸಲಹೆ ನೀಡಿದ ಅವರು ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಿಸಬೇಕಾದ ವಿವಿಧ ಹಂತಗಳ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.

ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಚನ್ನಪ್ಪ ಬಿ. ಮಾತನಾಡಿ, ‘30 ದಿನಗಳ ಅವಧಿಯಲ್ಲಿ ನೀಡುವ ಉದ್ಯಮಶೀಲತಾ ಕೌಶಲಾಭಿವೃದ್ಧಿ ತರಬೇತಿಯ ಸದುಪಯೋಗ ಪಡೆದುಕೊಂಡು, ಯಶಸ್ವಿ ಉದ್ಯಮದಾರರಾಗಬೇಕು ಹಾಗೂ ಉದ್ಯಮ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಬೇಕು’ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ದಾವಣಗೆರೆ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ) ಜಂಟಿ ನಿರ್ದೇಶಕ ಆರ್.ಪಿ. ಪಾಟೀಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಗೀತಾ, ದಾವಣಗೆರೆ ಎಂ.ಇ.ಎಸ್. ಕಾಲೇಜು ಪ್ರಾಂಶುಪಾಲ ಅಜ್ಜಣ್ಣ ಕೆ.ಆರ್, ಶಿವಾನಂದ ಎಚ್. ತಳವಾರ, ಬಸವರಾಜ ಜಿ.ಬಿ., ಮೋಹನ್‍ದಾಸ್ ದೇಸಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT