ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೈತ ಆತ್ಮಹತ್ಯೆ 

Published : 12 ಸೆಪ್ಟೆಂಬರ್ 2024, 15:52 IST
Last Updated : 12 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ರಾಣೆಬೆನ್ನೂರು: ರೇಷ್ಮೆ ಬೆಳೆಗಾಗಿ ಸಾಲ ಮಾಡಿದ್ದ ತಾಲ್ಲೂಕಿನ ಕೆರಿಮಲ್ಲಾಪುರ ಗ್ರಾಮದ ಯುವ ರೈತ ತಿರಕಪ್ಪ ಹೊನ್ನಪ್ಪ ತಳವಾರ (34) ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ಜಮೀನಿನಲ್ಲಿ ರೇಷ್ಮೆ ಬೆಳೆ ಬೆಳೆಯಲು ತಾಯಿಯ ಹೆಸರಿನಲ್ಲಿ ₹5 ಲಕ್ಷ ಮತ್ತು ತನ್ನ ಹೆಸರಿನಲ್ಲಿ ₹1.5 ಲಕ್ಷ ಸಾಲ ಮಾಡಿದ್ದರು. ಸಕಾಲಕ್ಕೆ ಮಳೆ ಬೆಳೆ ಬಾರದ ಕಾರಣ ಸಾಲ ತೀರಿಸುವುದು ಹೇಗೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT