ಶನಿವಾರ, ಅಕ್ಟೋಬರ್ 24, 2020
18 °C

ಜಿಲ್ಲೆಗೆ 10 ಸಾವಿರ ‘ಆರ್‌ಎಟಿ ಕಿಟ್’‌ ಪೂರೈಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಕರ್ನಾಟಕ ರಾಜ್ಯ ಔಷಧ ಉಗ್ರಾಣ ನಿಗಮದಿಂದ ಜಿಲ್ಲೆಗೆ 10,500 ರ‍್ಯಾಪಿಡ್‌ ಆಂಟಿಜೆನ್‌ ಟೆಸ್ಟ್‌ ಕಿಟ್‌ಗಳು ಹಂಚಿಕೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಪೂರೈಕೆಯಾಗಲಿವೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಮಾಹಿತಿ ನೀಡಿದ್ದಾರೆ. 

ಜಿಲ್ಲೆಯಲ್ಲಿ ಒಂದು ವಾರದಿಂದ ಆರ್‌ಎಟಿ ಕಿಟ್‌ಗಳ ತೀವ್ರ ಕೊರತೆಯಿಂದ ‘ರ‍್ಯಾಪಿಡ್‌ ಟೆಸ್ಟ್‌’ ಬಂದ್‌ ಆಗಿ, ಸಾರ್ವಜನಿಕರು ಪರದಾಡುತ್ತಿದ್ದಾರೆ. ಜಿಲ್ಲೆಗೆ ಪೂರೈಕೆಯಾಗಿದ್ದ 32,400 ಕಿಟ್‌ಗಳು ಜಿಲ್ಲಾ ಔಷಧ ಉಗ್ರಾಣದಿಂದ ವಿವಿಧ ತಾಲ್ಲೂಕುಗಳ ಆಸ್ಪತ್ರೆಗಳಿಗೆ ಹಂಚಿಕೆಯಾಗಿ ಬಹುತೇಕ ಖಾಲಿಯಾಗಿದ್ದವು.

ಈ ಕುರಿತು ಪ್ರಜಾವಾಣಿಯಲ್ಲಿ ಸೆ.24ರಂದು ‘ಕಿಟ್‌ ಕೊರತೆ: ರ‍್ಯಾಪಿಡ್‌ ಟೆಸ್ಟ್‌ ಬಂದ್‌!’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.