ಹಾವೇರಿ: ‘ಸ್ವಾತಂತ್ರ್ಯ, ಸಮಾನತೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಭ್ರಷ್ಟಾಚಾರ ಮುಕ್ತ, ಪಾರದರ್ಶಕ, ಜನಪರ ಆಡಳಿತಕ್ಕಾಗಿ ಸ್ವಚ್ಛ ವಿಧಾನಸಭೆ ಅಭಿಯಾನ’ ಹೆಸರಿನಡಿ ಎಂಜಿನಿಯರ್ ನಾಗರಾಜ ಶಿ. ಕಲಕುಟಗರ ಎಂಬುವವರು ರಾಜ್ಯಾದ್ಯಂತ ಪಾದಯಾತ್ರೆ ಹಮ್ಮಿಕೊಂಡಿದ್ದು, ಹಾವೇರಿಗೂ ಗುರುವಾರ ಭೇಟಿ ನೀಡಿದರು.

ಬಾಗಲಕೋಟೆಯ ನಾಗರಾಜ, 2023ರ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರ, ಜಾತಿ ವ್ಯವಸ್ಥೆ, ಕೋಮು ಸೌಹಾರ್ದಕ್ಕೆ ಧಕ್ಕೆ ಹಾಗೂ ಮತದಾರರಿಗೆ ಒಡ್ಡುವ ಆಮಿಷಗಳನ್ನು ನೋಡಿ ಬೇಸತ್ತಿದ್ದ ಅವರು, ಪ್ರಜಾಪ್ರಭುತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇದೀಗ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

‘ಭ್ರಷ್ಟರಲ್ಲದ, ಕೋಮುವಾದಿಯಲ್ಲದ ಪ್ರಬುದ್ಧ–ಜನಪರ–ಸುಸಂಸ್ಕೃತ ವ್ಯಕ್ತಿತ್ವವುಳ್ಳವರು ಬೇಕಾಗಿದ್ದಾರೆ’ ಎಂಬ ಫಲಕ ಹಿಡಿದುಕೊಂಡು ಸಾಗುತ್ತಿದ್ದಾರೆ. ಕರ್ನಾಟಕ ಹಾಗೂ ಭಾರತದ ಬಾವುಟವನ್ನೂ ಜೊತೆಗೆ ಕೊಂಡೊಯ್ಯುತ್ತಿದ್ದಾರೆ. ಈ ಪಾದಯಾತ್ರೆಗಾಗಿ ನಾಗರಾಜ ತಮ್ಮ ಕೆಲಸಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ವಂತ ಖರ್ಚಿನಲ್ಲಿಯೇ ರಾಜ್ಯದ ಪ್ರತಿಯೊಬ್ಬ ಜನರನ್ನು ತಲುಪಬೇಕೆಂಬ ಉದ್ದೇಶ ಅವರದ್ದಾಗಿದೆ.

ಪಾದಯಾತ್ರೆ ಸಂದರ್ಭದಲ್ಲಿ ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಆಡಳಿತದಲ್ಲಿ ಭ್ರಷ್ಟಾಚಾರ, ಕೋಮವಾದ, ಜಾತಿ ವ್ಯವಸ್ಥೆ ಮಿತಿಮೀರಿದೆ. ಅಪರಾಧಿಗಳ ಕೈಗೆ ಆಡಳಿತ ಸಿಗುತ್ತಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸವಾಗಬೇಕಿದೆ. ಇದಕ್ಕಾಗಿ ಜನರನ್ನು ಎಚ್ಚರಿಸಲು ನಾನು ಪಾದಯಾತ್ರೆ ಹೊರಟಿದ್ದೇನೆ’ ಎಂದರು.

‘ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ಮನಸ್ಸಿಗೆ ಬೇಸರವಾಯಿತು. ಮತದಾರರು ಸಹ ಆಮಿಷಕ್ಕೆ ಒಳಗಾಗಿ ಮತದಾನ ಮಾಡುತ್ತಿರುವುದು ದುರ್ದೈವದ ಸಂಗತಿ. ಪಾದಯಾತ್ರೆ ಮೂಲಕ ಮತದಾರರನ್ನೂ ಎಚ್ಚರಿಸುವ ಕೆಲಸ ಮಾಡುತ್ತಿದ್ದೇನೆ. ಹೋದ ಕಡೆಯಲ್ಲೆಲ್ಲ ವೃತ್ತಗಳಲ್ಲಿ ನಿಂತು ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದೇನೆ. ಇನ್ನಾದರೂ ಬದಲಾಗಿ, ಒಳ್ಳೆಯ ಹಾಗೂ ಪ್ರಾಮಾಣಿಕ ವ್ಯಕ್ತಿಗೆ ಮತ ನೀಡುವಂತೆ ಕೋರುತ್ತಿದ್ದೇನೆ’ ಎಂದು ಹೇಳಿದರು.

‘ಸಮಾಜ ಸುಧಾರಣೆಯ ಭರವಸೆಯೊಂದಿಗೆ ಪಾದಯಾತ್ರೆ ಹೊರಟಿದ್ದೇನೆ. ಫೆಬ್ರುವರಿ 19ರಂದು ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸಿದ್ದೆ. ಅಲ್ಲಿಂದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು, ಮೈಸೂರು, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಕುಮಟಾದವರೆಗೂ ಪಾದಯಾತ್ರೆ ನಡೆಸಿದೆ. ಮಳೆ ಇದ್ದಿದ್ದರಿಂದ ಗುಡ್ಡ ಕುಸಿಯುವ ಬಗ್ಗೆ ಸ್ಥಳೀಯರು ಎಚ್ಚರಿಕೆ ನೀಡಿದರು. ಹೀಗಾಗಿ, ಕುಮಟಾದಿಂದ ಹುಬ್ಬಳ್ಳಿಗೆ ಬಸ್ನಲ್ಲಿ ಬಂದೆ. ಹುಬ್ಬಳ್ಳಿಯಿಂದ ಹಾವೇರಿಗೆ ಪುನಃ ಪಾದಯಾತ್ರೆಯಲ್ಲಿ ಬಂದಿದ್ದೇನೆ. ಈಗಾಗಲೇ 1,500 ಕಿ.ಮೀ. ನಡೆದಿದ್ದೇನೆ’ ಎಂದರು.

‘ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುತ್ತೇನೆ. ಎಲ್ಲ ಕಡೆಯೂ ಯುವಕರನ್ನು ಸಂಘಟಿಸುತ್ತಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಾಮಾಣಿಕ ಜನರು ಕಣದಲ್ಲಿರಬೇಕೆಂಬುದು ನಮ್ಮ ಆಶಯ’ ಎಂದು ಹೇಳಿದರು.

ರಾಜಕೀಯದಲ್ಲಿ ಬದಲಾವಣೆ ಬೇಕು. ಪ್ರಾಮಾಣಿಕ ಜನರು ಚುನಾವಣೆಗೆ ಸ್ಪರ್ಧಿಸಬೇಕು. ಮತದಾರರು ಸಹ ಆಮಿಷಗಳಿಗೆ ಒಳಗಾಗದೇ ಒಳ್ಳೆಯವರನ್ನು ಚುನಾಯಿಸಬೇಕು
ನಾಗರಾಜ ಶಿ. ಕಲಕುಟಗರ ಎಂಜಿನಿಯರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.