ಗುರುವಾರ , ಜನವರಿ 27, 2022
20 °C
ರಾಷ್ಟ್ರೀಯ ಯುವದಿನ ಹಾಗೂ ರಾಷ್ಟ್ರೀಯ ಯುವ ಸಪ್ತಾಹ

‘ಸ್ವಾಮಿ ವಿವೇಕಾನಂದರ ಆದರ್ಶ ಮೈಗೂಡಿಸಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಸಂದೇಶ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದು, ಉತ್ತಮ ವ್ಯಕ್ತಿತ್ವ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಎಂದು ಯುವವಾಗ್ಮಿ ಕಿರಣಕುಮಾರ ದೊಡ್ಡಮನಿ ವಿವೇಕವಂಶಿ ಹೇಳಿದರು.

ನೆಹರೂ ಯುವ ಕೇಂದ್ರ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಎನ್.ಸಿ.ಸಿ., ಎನ್.ಎಸ್.ಎಸ್, ಸ್ಕೌಟ್ ಆಂಡ್ ಗೈಡ್ಸ್, ವೈ,ಆರ್.ಸಿ., ಇಕೋ ಕ್ಲಬ್, ರೆಡ್ ಕ್ರಾಸ್ ಜಿಲ್ಲೆಯ ಪದವಿ ಕಾಲೇಜುಗಳ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ನಗರದ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಬುಧವಾರ ಸ್ವಾಮಿ ವಿವೇಕಾಂದರ 159ನೇ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವದಿನ ಮತ್ತು ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಹಾಗೂ ಪರಮಹಂಸರ ಬಾಂಧ್ಯವದಂತೆ ಗುರು-ಶಿಷ್ಯರ ಪರಂಪರೆಯನ್ನು ವಿದ್ಯಾರ್ಥಿಗಳು ಮುಂದುವರಿಸಬೇಕು. ಗುರುಗಳನ್ನು ಗೌರವದಿಂದ ಕಾಣಬೇಕು ಎಂದರು.

ಜಗತ್ತಿನಲ್ಲೇ ಭಾರತ ದೇಶ ಅತ್ಯಧಿಕ ಯುವ ಸಮೂಹ ಹೊಂದಿದೆ. ನಿಮ್ಮ ಶಕ್ತಿ, ದೇಶದ ಅಭಿವೃದ್ಧಿಗೆ ಸರಿಯಾಗಿ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ನೀವು ಉತ್ತಮ ಆಲೋಚನೆ ರೂಢಿಸಿಕೊಳ್ಳಬೇಕು. ವಿವೇಕಾನಂದರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಯುವಕರಾದವರು ಪರೀಕ್ಷಿಸುವ, ಪ್ರಶ್ನಿಸುವ ಗುಣಗಳನ್ನು ರೂಢಿಸಿಕೊಳ್ಳಬೇಕು. ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಾಧ್ಯ ಎಂದು ಕಿವಿಮಾತು ಹೇಳಿದರು. 

ಕಾರ್ಯಕ್ರಮದಲ್ಲಿ ಜಿ.ಎಚ್. ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ.ಸಂಧ್ಯಾ ಆರ್. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜೀವ ಎನ್.ಕೂಲೇರ, ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಸಂಜೀವ ಭುಕ್ಯಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವಿ.ಎಂ.ಕುಮ್ಮೂರ, ಜಿ.ಎಚ್.ಪ.ಪೂ ಕಾಲೇಜಿನ ಪ್ರಾಚಾರ್ಯ ಜೆ.ಆರ್.ಸಿಂಧೆ, ಜೆ.ಎಚ್.ಕಾಲೇಜಿನ ಕಾರ್ಯಾಧ್ಯಕ್ಷ ಡಿ.ಎ.ಕೊಲ್ಲಾಪುರೆ ಇದ್ದರು. ಪ್ರಾಧ್ಯಾಪಕಿ ಎಂ.ಪಿ.ಕಣವಿ ಸ್ವಾಗತಿಸಿದರು. ಯೂತ್‌ ರೆಡ್‌ಕ್ರಾಸ್‌ ಅಧಿಕಾರಿ ಪ್ರೊ.ಜಿ.ಕೆ.ಮಂಕಣಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು