ಶನಿವಾರ, ಡಿಸೆಂಬರ್ 14, 2019
24 °C

ಗೃಹ ಸಚಿವರ ಗಡಿಪಾರಿಗೆ ಎಚ್‌.ಕೆ.ಪಾಟೀಲ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿರುವ ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಚುನಾವಣಾ ಆಯೋಗ ಕೂಡಲೇ ರಾಜ್ಯದಿಂದ ಗಡಿಪಾರು ಮಾಡಬೇಕು’ ಎಂದು ಶಾಸಕ ಎಚ್‌.ಕೆ.ಪಾಟೀಲ ಆಗ್ರಹಿಸಿದರು. 

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನ.20ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮಂಡ್ಯ ಜಿಲ್ಲೆಯ ನಿಡಗಟ್ಟಿ ಚೆಕ್‌ಪೋಸ್ಟ್‌ನಲ್ಲಿ ತಮ್ಮ ವಾಹನವನ್ನು ತಪಾಸಣೆಗೆ ಒಳಪಡಿಸದೇ ಹೋಗಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಿ, ಗೃಹ ಸಚಿವರ ವಾಹನ ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದೆ’ ಎಂದರು. 

ಪ್ರಮಾದ ಎಸಗಿರುವ ಗೃಹ ಸಚಿವರ ವಿರುದ್ಧ ಯಾವ ಕ್ರಮವನ್ನೂ ಕೈಗೊಂಡಿಲ್ಲ ಏಕೆ? ನೀತಿಸಂಹಿತೆ ಉಲ್ಲಂಘಿಸಿದ ಬೊಮ್ಮಾಯಿ ಅವರು ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಈ ಕ್ಷಣದಿಂದಲೇ ಪೊಲೀಸ್‌ ಸಿಬ್ಬಂದಿಗೆ ಅವರು ಯಾವುದೇ ನಿರ್ದೇಶನ ನೀಡದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ಚುನಾವಣೆ ಅಪವಿತ್ರಗೊಳಿಸಿದ ಬಿಜೆಪಿ

ಚುನಾವಣೆ ಸಂದರ್ಭ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರ ಮನೆ ಮೇಲೆ ಐ.ಟಿ. ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಆಡಳಿತ ಯಂತ್ರವನ್ನು ಸಂಪೂರ್ಣ ದುರುಪಯೋಗ ಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಚುನಾವಣೆಯನ್ನು ಅಪವಿತ್ರಗೊಳಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು