ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಂತುಹುಳು ನಿವಾರಣೆಗೆ ಮಾತ್ರೆ ಸೇವಿಸಿ’

Last Updated 11 ಆಗಸ್ಟ್ 2022, 14:14 IST
ಅಕ್ಷರ ಗಾತ್ರ

ಹಾವೇರಿ: ಮಕ್ಕಳು ಜಂತುಹುಳು ಬಗ್ಗೆ ನಿರ್ಲಕ್ಷ್ಯವಹಿಸದೇ ಸ್ವಯಂಪ್ರೇರಣೆಯಿಂದ ಮಾತ್ರೆ ಸೇವಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ.2ರಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯರ ಸೂಚನೆಯಂತೆ ಮಕ್ಕಳು ಮಾತ್ರೆ ಸೇವಿಸಬೇಕು ಎಂದು ಹೇಳಿದರು.

ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ ಪ್ರಾಸ್ತಾವಿಕವಾಗಿ ಮಾತನಾಡಿ, ಜಂತುಹುಳು ಬಾಧೆಯಿಂದ ಅಪೌಷ್ಟಿಕತೆ, ರಕ್ತಹೀನತೆ ಸಮಸ್ಯೆಗಳು ಉಂಟಾಗುತ್ತದೆ. ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ, ಮಕ್ಕಳ ಬುದ್ಧಿಶಕ್ತಿ ಕಡಿಮೆಯಾಗಿ ಕಲಿಕೆಯಲ್ಲಿ ಹಿಂದೆ ಬೀಳಬಹುದು ಹಾಗೂ ಶಾಲಾ ಹಾಜರಾತಿ ಕಡಿಮೆಯಾಗಿ ಕ್ರಮೇಣ ಶಾಲೆಯಿಂದ ಹೊರಗುಳಿಯುವ ಸಾಧ್ಯತೆ ಇದೆ.ಒಂದರಿಂದ ಎರಡು ವರ್ಷದ ಮಕ್ಕಳಿಗೆ ಕೇವಲ ಅರ್ಧ ಮಾತ್ರೆ, ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಒಂದು ಪೂರ್ತಿ ಮಾತ್ರೆ ನೀಡಲಾಗುವುದು ಎಂದು ಹೇಳಿದರು.

ಜಿಲ್ಲೆಯ 5,96,904 ಮಕ್ಕಳನ್ನು ಈಗಾಗಲೇ ಗುರುತಿಸಲಾಗಿದ್ದು, ಎಲ್ಲರಿಗೂ ಲಭ್ಯವಿರುವ ರೀತಿ 6,32,130 ಲಕ್ಷ ಮಾತ್ರೆಗಳನ್ನು ಈಗಾಲೇ ಸರ್ಕಾರಿ, ಅನುದಾನಿತ, ಅನುದಾನರಹಿತ ಖಾಸಗಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಆರೋಗ್ಯ ಕಾರ್ಯಕರ್ತರು, ಶಾಲಾ ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ–ಮನೆಗೆ ಭೇಟಿ ಮಾಡಿ ಔಷಧಿ ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಡಿಡಿಪಿಐ ಜಗದೀಶ್ವರ, ತಾಲ್ಲೂಕು ವೈದ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಗಣಿತ ಪರಿವೀಕ್ಷಕ ಬಿ.ಎಸ್.ಪಾಟೀಲ, ಡಾ.ಚನ್ನಪ್ಪ ಲಮಾಣಿ, ಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಟಿ.ಬೆನ್ನೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT