ತಿಳವಳ್ಳಿ: ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೈಹಿಕವಾಗಿ, ಮಾನಸಿಕವಾಗಿ ಸದೃಢಗೊಳ್ಳಲು ಸಹಕಾರಿಯಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಬೇಕು ಎಂದು ಪ್ರಾಚಾರ್ಯರಾದ ಸೀತಾಳದ.ಎಸ್.ಎಂ. ಹೇಳಿದರು.

ಇಲ್ಲಿಯ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಗಳು ನಮ್ಮ ಜೀವನದ ಒಂದು ಪ್ರಮುಖ ಭಾಗವಾಗಿದೆ. ದೇಹದ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ನಮ್ಮ ಮೆದುಳಿನ ಬೆಳವಣಿಗೆಯಲ್ಲಿ ಪ್ರಯೋಜನಕಾರಿಯಾಗಿದೆ. ಕ್ರೀಡೆಗಳನ್ನು ವ್ಯಾಯಾಮದ ಅತ್ಯುತ್ತಮ ಸಾಧನವಾಗಿದೆ ಹಾಗೂ ನಮ್ಮ ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆ ಸಹಕಾರಿಯಾಗಿದೆ ಎಂದರು.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಮಹೇಶ ಅಕ್ಕಿವಳ್ಳಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರತರುವ ಕೆಲಸವನ್ನು ಶಿಕ್ಷಕರು ಮಾಡಿದರೆ ಸಾಕು ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶದ ಉತ್ತಮ ಪ್ರಜೆಯಾಗಿ ಹೊರಹೊಮ್ಮುತ್ತಾರೆ. ವಿದ್ಯಾರ್ಥಿಗಳು ಟಿವಿ, ಸಿನಿಮಾ, ಮೊಬೈಲ್ ಗಳ ಕಡೆ ಗಮನ ಹರಿಸುವುದನ್ನು ಬಿಟ್ಟು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸಬೇಕು ಎಂದರು.

ಐಕ್ಯೂಎಸಿ ಸಂಚಾಲಕ ಸಂತೋಷ ಸಿ., ಪ್ರಶಾಂತ ಬಾರಾಟಕ್ಕೆ, ರಮೇಶ ಆರ್., ರವಿ ಎಂ., ಕಲ್ಪನಾ ಎಸ್.ಪಿ., ಶಾರದಮ್ಮ, ಉಮೇಶ ಕುಬುಸದ, ವಿಜಯಲಕ್ಷ್ಮೀ ಶೆಟ್ಟರ, ನವೀನ, ಸಂಗಣ್ಣ, ಶಿವಕೂಮರ, ಶಾಬೂದ್ದೀನ್, ಪ್ರಿಯಾಂಕ, ಸಂಗೀತಾ, ಈರಣ್ಣ ಕುಂಬಾರ, ರತ್ನಮ್ಮ ಸಿದ್ದೋಜಿ, ಗಣೇಶ ಗೌಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-1421116240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.