ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಏ.18ರಿಂದ

ವ್ಯವಸ್ಥಿತ ಆಯೋಜನೆ, ವ್ಯಾಪಕ ಪ್ರಚಾರಕ್ಕೆ ಜಿಲ್ಲಾಧಿಕಾರಿ ಸೂಚನೆ
Last Updated 11 ಏಪ್ರಿಲ್ 2022, 16:09 IST
ಅಕ್ಷರ ಗಾತ್ರ

ಹಾವೇರಿ: ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸೂಕ್ತ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಏಪ್ರಿಲ್ 18ರಿಂದ 22ರವರೆಗೆ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕುಮಟ್ಟದ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ. ವ್ಯವಸ್ಥಿತ ಆಯೋಜನೆ ಮತ್ತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ತಾಲ್ಲೂಕು ಮಟ್ಟದ ಆರೋಗ್ಯ ಮೇಳದ ಆಯೋಜನೆ ಕುರಿತಂತೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು,ಏಪ್ರಿಲ್ 18ರಂದು ಹಾನಗಲ್, ಏ.19ರಂದು ರಾಣೆಬೆನ್ನೂರು. ಏ.20ರಂದು ಹಿರೇಕೆರೂರು ಹಾಗೂ ಹಾವೇರಿ, ಏ.21ರಂದು ಶಿಗ್ಗಾವಿ ಹಾಗೂ ಸವಣೂರ, ಏ.22ರಂದು ಬ್ಯಾಡಗಿ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ಒಂದು ದಿನದ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮ ಆಯೋಜಿಸಲು ಸಮಯ ನಿಗಧಿಪಡಿಸಿಕೊಂಡಿರುವ ಕುರಿತಂತೆ ತಾಲೂಕಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದರು.

ಆರೋಗ್ಯ ಮೇಳದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಕೋವಿಡ್ ಲಸಿಕಾ ಕೌಂಟರ್, ಆಯುಷ್ಮಾನ್ ಭಾರತ ಕೌಂಟರ್, ಆಯುಷ್ ಇಲಾಖೆ ಕೌಂಟರ್, ಪೋಷಣ ಅಭಿಯಾನ ಕೌಂಟರ್ ಹಾಗೂ ಆರೋಗ್ಯ ಇಲಾಖೆಯ ಸರ್ಕಾರದ ಯೋಜನೆಗಳು, ಸೌಲಭ್ಯಗಳ ಕುರಿತಂತೆ ಸಾಮಾನ್ಯರಿಗೆ ಮಾಹಿತಿ ನೀಡುವ ಆರೋಗ್ಯ ಶಿಕ್ಷಣ ಕೌಂಟರ್‌ಗಳನ್ನು ತೆರೆದು ಮಾಹಿತಿ ಮತ್ತು ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರ ಮಾತನಾಡಿ, ತಾಲ್ಲೂಕು ಆರೋಗ್ಯ ಮೇಳಕ್ಕೆ ಪ್ರತಿ ತಾಲೂಕಿಗೆ ₹1 ಲಕ್ಷ ಬಿಡುಗಡೆ ಮಾಡಲಾಗುತ್ತದೆ. ಅಗತ್ಯ ಔಷಧಿಗಳನ್ನು ಬಿಡುಗಡೆ ಮಾಡಲಾಗತ್ತದೆ. ತಜ್ಞವೈದ್ಯರ ನೆರವನ್ನು ಒದಗಿಸಲಾಗುತ್ತದೆ. ತಪಾಸಣೆ, ಸ್ಕ್ಯಾನಿಂಗ್, ಅಗತ್ಯ ಔಷಧೋಪಚಾರ ಜೊತೆಗೆ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಕುರಿತಂತೆ ಮಾಹಿತಿ ಮಳಿಗೆಗಳನ್ನು ತೆರೆದು ಜಾಗೃತಿ ಮೂಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲೆಯ ಎಲ್ಲ ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT