ಹಾವೇರಿ: ‘ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂಬ ಆರೋಪದಡಿ ಸರ್ಕಾರಿ ಉರ್ದು ಶಾಲೆ ಶಿಕ್ಷಕ ಜಗದೀಶ್ ವಗ್ಗಣ್ಣನವರ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣದ ಮೂರು ಆರೋಪಿಗಳನ್ನು ಸವಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸವಣೂರಿನ ನಿವಾಸಿಗಳಾದ ಅಬ್ದುಲಗನಿ ಪರಾಸ್, ಕಲೀಲ್ಅಹ್ಮದ್ ಖತೀಬ್, ಅಹ್ಮದ್ಖಾನ್ ಖಾಂಜಾಡೆ ಬಂಧಿತ ಆರೋಪಿಗಳು.

ಡಿ. 10ರಂದು ಶಾಲೆಗೆ ನುಗ್ಗಿದ್ದ ಆರೋಪಿಗಳು, ಶಿಕ್ಷಕ ಜಗದೀಶ್ ಅವರನ್ನು ಥಳಿಸಿದ್ದರು. ಚಪ್ಪಲಿಯಿಂದ ಹೊಡೆದಿದ್ದರು. ಬಳಿಕ, ಚಪ್ಪಲಿ ಹಾರ ಹಾಕಿ ಸವಣೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಅಪಮಾನ ಮಾಡಿದ್ದರು. ಮೆರವಣಿಗೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದ ಬಗ್ಗೆ ಸಂತ್ರಸ್ತ ಶಿಕ್ಷಕ ಜಗದೀಶ್ ಅವರು ಠಾಣೆಗೆ ದೂರು ನೀಡಿದ್ದರು. 22 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಸವಣೂರು ಪೊಲೀಸರು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

‘ಶಿಕ್ಷಕನ ಕೊರಳಲ್ಲಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದ ಆರೋಪಿಗಳಾದ ಸವಣೂರಿನ ಅಬ್ದುಲಗನಿ ಪರಾಸ್, ಕಲೀಲ್ಅಹ್ಮದ್ ಖತೀಬ್, ಅಹ್ಮದ್ಖಾನ್ ಖಾಂಜಾಡೆ ಅವರನ್ನು ಬಂಧಿಸಲಾಗಿದೆ. ಸದ್ಯ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಶಾಲೆಯೊಳಗೆ ಹಾಗೂ ರಸ್ತೆಯಲ್ಲಿ ನಡೆದಿದ್ದ ಮೆರವಣಿಗೆ ವಿಡಿಯೊ ಆಧರಿಸಿ ಆರೋಪಿಗಳನ್ನು ಗುರುತಿಸಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಲ್ಲ ಆರೋಪಿಗಳು ಊರು ತೊರೆದಿದ್ದಾರೆ. ಈ ಪೈಕಿ ಮೂವರು ಮಾತ್ರ ಸಿಕ್ಕಿಬಿದ್ದಿದ್ದಾರೆ. ಉಳಿದ ಆರೋಪಿಗಳ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

ಘಟನೆ ನಿಯಂತ್ರಿಸುವಲ್ಲಿ ಹಾಗೂ ತ್ವರಿತವಾಗಿ ಕಾನೂನು ಕ್ರಮ ಜರುಗಿಸುವಲ್ಲಿ ವಿಫಲರಾಗಿ ಕರ್ತವ್ಯಲೋಪ ಎಸಗಿದ ಆರೋಪದಡಿ ಸಿಪಿಐ ಎಸ್. ದೇವಾನಂದ ಹಾಗೂ ಹೆಡ್ ಕಾನ್ಸ್ಟೆಬಲ್ ಮಲ್ಲಿಕಾರ್ಜುನ ಓದನವರ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಕಬ್ಬಿಣದ ರಾಡ್ನಿಂದ ಹಲ್ಲೆ: ‘ಶಾಲೆಗೆ ನುಗ್ಗಿದ್ದ ಆರೋಪಿಗಳು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದಾರೆ’ ಎಂದು ಶಿಕ್ಷಕ ಜಗದೀಶ್ ಅವರು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿಸಿದ್ದರು.

‘ಸರ್ಕಾರಿ ಉರ್ದು ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೇನೆ. ಡಿ. 10ರಂದು ಬೆಳಿಗ್ಗೆ 11.30 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಗುಂಪು ಕಟ್ಟಿಕೊಂಡು ಶಾಲೆಗೆ ಬಂದಿದ್ದ ಆರೋಪಿಗಳು, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುವುದಾಗಿ ಆರೋಪಿಸಿ ಹಲ್ಲೆ ಮಾಡಿದರು. ಕೊಲೆಗೂ ಯತ್ನಿಸಿದರು. ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಶಾಲೆಯಿಂದ ಹೊರಗಡೆ ಎಳೆದುಕೊಂಡು ಬಂದು ಚಪ್ಪಲಿಯಿಂದ ಹೊಡೆದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಸವಣೂರಿನ ಹಲವು ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಅಪಮಾನ ಮಾಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಎಲ್ಲರ ವಿರುದ್ಧ ಕ್ರಮ: ‘ಸವಣೂರು ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಶಿಕ್ಷಕ ಹಾಗೂ ಶಿಕ್ಷಕನನ್ನು ಮೆರವಣಿಗೆ ಮಾಡಿದ ಆರೋಪದಡಿ 22 ಮಂದಿ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಎಸ್ಪಿ ಯಶೋಧಾ ವಂಟಗೋಡಿ ತಿಳಿಸಿದರು.

‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಕಾನೂನಿನಡಿ ಎಲ್ಲರೂ ಸಮಾನರು. ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಸವಣೂರು ಪ್ರಕರಣದಲ್ಲಿ ತಪ್ಪಿತಸ್ಥರಾದ ಎಲ್ಲರ ವಿರುದ್ಧವೂ ಕ್ರಮವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.