ಹಾನಗಲ್: ಕೋವಿಡ್ ನಿರ್ವಹಣೆ ಕಾರ್ಯಕ್ಕೆ ನಿಯೋಜನೆಗೊಳ್ಳುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತಮ ಆದ್ಯತೆ ಮೇಲೆ ಲಸಿಕೆ ನೀಡಬೇಕು. ಶಿಕ್ಷಕರನ್ನು ಕೋವಿಡ್ ಸೇನಾನಿಗಳೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈಗಾಗಲೇ ಕೋವಿಡ್ ವ್ಯಾಧಿಗೆ ಬಹಳಷ್ಟು ಶಿಕ್ಷಕರು ಬಲಿಯಾಗಿದ್ದಾರೆ. ಇದು ಶಿಕ್ಷಕ ವಲಯದಲ್ಲಿ ತಲ್ಲಣ ಮೂಡಿಸಿದೆ. ಭಯದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಶಿಕ್ಷಕರ ರಕ್ಷಣೆಗೆ ಕ್ರಮ ಜರುಗಿಸಬೇಕು. ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು.

ಶಿಕ್ಷಕರ ಚಿಕಿತ್ಸೆ ಹಾಗೂ ಮರಣ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. 55 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ಕೊರೊನಾ ಕರ್ತವ್ಯದಿಂದ ಕೈಬಿಡಬೇಕು.

ಶಿಕ್ಷಕರ ಚಿಕಿತ್ಸೆಗಾಗಿ ಪ್ರತ್ಯೇಕ ಕೊರೊನಾ ಆರೈಕೆ ಕೇಂದ್ರ ತೆರೆಯಬೇಕು ಎಂದು ಮನವಿ ಮಾಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯೇಂದ್ರ ಯತ್ನಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಬಡಿಗೇರ, ಕಾರ್ಯದರ್ಶಿ ಶಿವಾನಂದ ಚಕ್ರಸಾಲಿ, ಎಂ.ಎ.ಜಾಗೀರ್ದಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.