ಸೋಮವಾರ, ಫೆಬ್ರವರಿ 17, 2020
18 °C

ಲೈಂಗಿಕ ದೌರ್ಜನ್ಯ: ಅಪರಾಧಿಗೆ 10 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಶಿಗ್ಗಾವಿ ತಾಲ್ಲೂಕು ಹೊಸೂರ ಗ್ರಾಮದ ಮಲ್ಲೇಶ ರಾಮಣ್ಣ ಮಾದರ ಎಂಬಾತನಿಗೆ ಒಂದನೇ ಹೆಚ್ಚುವರಿ ಸೆಷನ್ಸ್‌ (ಪೋಕ್ಸೋ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರು 10 ವರ್ಷಗಳ ಜೈಲುಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಿದ್ದಾರೆ.

ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿಗ್ಗಾವಿ ಠಾಣಾ ವೃತ್ತ ನಿರೀಕ್ಷಕರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಫೆ.3 ರಂದು ತೀರ್ಪು ಪ್ರಕಟಿಸಲಾಗಿದೆ.

ದಂಡದ ಹಣದಲ್ಲಿ ₹25 ಸಾವಿರವನ್ನು ಸಂತ್ರಸ್ತೆಗೆ ಪರಿಹಾರವಾಗಿ ಪಾವತಿಸಲು ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿನಾಯಕ್ ಪಾಟೀಲ ವಾದ ಮಂಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)