ಹಾವೇರಿ: ‘ಸೇವಾನಿರತ ಶಿಕ್ಷಕರಿಗೆ ನಿಗದಿಪಡಿಸಿರುವ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ರದ್ದುಗೊಳಿಸಬೇಕು’ ಎಂದು ಆಗ್ರಹಿಸಿ ಗುರುವಾರ ಸಾಂಕೇತಿಕ ಪ್ರತಿಭಟನೆ ನಡೆಸಿದ ಜಿಲ್ಲೆಯ ಶಿಕ್ಷಕರು, ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಮಕ್ಕಳಿಗೆ ಪಾಠ ಮಾಡಿದರು.

ಅಖಿಲ ಭಾರತ ಶಿಕ್ಷಕರ ಫೆಡರೇಷನ್ನ ರಾಷ್ಟ್ರೀಯ ಘಟಕದಿಂದ ಜ.5ರಿಂದ ಜ.9ರ ವರೆಗೆ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದಕ್ಕೆ ಬೆಂಬಲ ವ್ಯಕ್ತಪಡಿಸಿರುವ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಶಿಕ್ಷಕರು ಗುರುವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಜಿಲ್ಲೆಯ ಹಾವೇರಿ, ರಾಣೆಬೆನ್ನೂರು, ಹಾನಗಲ್, ರಟ್ಟೀಹಳ್ಳಿ, ಶಿಗ್ಗಾವಿ, ಸವಣೂರು, ಹಿರೇಕೆರೂರು ಹಾಗೂ ಬ್ಯಾಡಗಿ ತಾಲ್ಲೂಕಿನಲ್ಲಿರುವ ಎಲ್ಲ ಪ್ರಾಥಮಿಕ ಶಾಲೆಗಳ 5,250 ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಗುರುವಾರ ಇಡೀ ದಿನ ಕೆಲಸ ಮಾಡಿದರು.

‘ಟಿಇಟಿ ಕಡ್ಡಾಯ ಆದೇಶ ರದ್ದುಪಡಿಸಬೇಕು. ಹೊಸ ಪಿಂಚಣಿ ಕೈಬಿಟ್ಟು, ಹಳೇ ಪಿಂಚಣಿ ಜಾರಿಗೊಳಿಸಬೇಕು. ದೇಶದಾದ್ಯಂತ ಎಲ್ಲ ಶಿಕ್ಷಕರಿಗೆ ಸಮಾನ ವೇತನ ನೀಡಬೇಕು. ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕದ ಬದಲು, ಕಾಯಂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಒಂದು ದಿನ ಸಾಂಕೇತಿಕ ಪ್ರತಿಭಟನೆ ನಡೆಸಿದೆವು’ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ. ಶಿಡೇನೂರ ತಿಳಿಸಿದರು.

‘ಹಾವೇರಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಗುರುವಾರ ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ಪಾಲ್ಗೊಂಡಿದ್ದಾರೆ. ಈ ಪ್ರತಿಭಟನೆಯು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂಬರುವ ದಿನಗಳಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಅಖಿಲ ಭಾರತ ಶಿಕ್ಷಕರ ಫೆಡರೇಷನ್ನ ರಾಷ್ಟ್ರೀಯ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ, ‘ಟಿಇಟಿ ರದ್ದುಪಡಿಸಲು ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್ನಲ್ಲಿ ನವೆಂಬರ್ 24ರಂದು ಪ್ರತಿಭಟನೆ ನಡೆಸಲಾಗಿತ್ತು. ಇದಾದ ನಂತರ, ಈಗ ದೇಶವ್ಯಾಪಿ ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ದಾರೆ’ ಎಂದರು.

‘ಟಿಇಟಿ ಕಡ್ಡಾಯಗೊಳಿಸಿರುವುದರಿಂದ ದೇಶದ ಲಕ್ಷಾಂತರ ಶಿಕ್ಷಕರು ಆತಂಕಗೊಂಡಿದ್ದಾರೆ. ಶಿಕ್ಷಕರ ಪರವಾಗಿ ನಿರಂತರವಾಗಿ ಹೋರಾಟ ಹಮ್ಮಿಕೊಳ್ಳಲು ಅಖಿಲ ಭಾರತ ಶಿಕ್ಷಕರ ಫೆಡರೇಷನ್ ತೀರ್ಮಾನಿಸಿದೆ. ಮುಂಬರುವ ದಿನಗಳಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಪ್ರತಿಭಟನೆಗಳು ನಡೆಯಲಿವೆ’ ಎಂದರು.

‘ಟಿಇಟಿ ನಡೆಸಿದರೆ, ಶಿಕ್ಷಕರು ಹಾಗೂ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಶಿಕ್ಷಕರ ಸೇವಾ ಅನುಭವವೇ ದೊಡ್ಡ ತರಬೇತಿಯಾಗಿದೆ. ಹೀಗಾಗಿ, ಪರೀಕ್ಷೆ ನಡೆಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸು ಪಡೆಯಬೇಕು. ಈ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಮರುಪರಿಶೀಲನೆ ನಡೆಸುವಂತೆ ಅರ್ಜಿ ಸಹ ಸಲ್ಲಿಸಬೇಕು’ ಎಂದು ಅವರು ಆಗ್ರಹಿಸಿದರು.