ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನಲ್ಲಿ ಕೊಚ್ಚಿ ಹೋಗಿದ್ದ ಅಜ್ಜಿಯ ಶವ ಪತ್ತೆ

Last Updated 1 ಸೆಪ್ಟೆಂಬರ್ 2022, 12:37 IST
ಅಕ್ಷರ ಗಾತ್ರ

ಹಿರೇಕೆರೂರು: ನಿರಂತರವಾಗಿ ಸುರಿದ ಮಳೆಯಿಂದ ತಾಲ್ಲೂಕಿನ ಹಳೆವೀರಾಪುರ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಬುಧವಾರ ಕೊಚ್ಚಿಕೊಂಡು ಹೋಗಿದ್ದ ಅಜ್ಜಿಯೊಬ್ಬರು ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಹಳೆವೀರಾಪುರ ಗ್ರಾಮದ ಬಡಿಮಾ ಕಾಶೀಂಸಾಬ್ ದಾಸನಕೊಪ್ಪ (66) ಮೃತಪಟ್ಟ ಅಜ್ಜಿ. ಬುಧವಾರ ಸಂಜೆ ಕಟ್ಟಿಗೆ ತರಲು ಹಳ್ಳದ ಕಡೆ ಹೋಗಿದ್ದಾಗ, ಗ್ರಾಮದ ಹಳ್ಳ ದಾಟುವ ಸಂದರ್ಭದಲ್ಲಿ ಕೊಚ್ಚಿಕೊಂಡು ಹೋಗಿದ್ದರು.

ರಾತ್ರಿ ಇಡೀ ಕುಟುಂಬ ಸದಸ್ಯರು ಅಜ್ಜಿಗಾಗಿ ಹುಡುಕಾಟ ನಡೆಸಿದ್ದರು. ಗುರುವಾರ ಬೆಳಿಗ್ಗೆ ಗ್ರಾಮದ ಸಮೀಪದ ಹಳ್ಳದಲ್ಲಿ ಅಜ್ಜಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಹಿರೇಕೆರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT