ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್ | ಶ್ರೀರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು: ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

Published 23 ಜನವರಿ 2024, 16:31 IST
Last Updated 23 ಜನವರಿ 2024, 16:31 IST
ಅಕ್ಷರ ಗಾತ್ರ

ಹಾನಗಲ್: ಅಯೋಧ್ಯೆ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಶಿರಗೋಡ ಗ್ರಾಮದಲ್ಲಿ ಸೋಮವಾರ ಅಳವಡಿಸಲಾಗಿದ್ದ ರಾಮನ ಚಿತ್ರವಿರುವ ಬ್ಯಾನರ್‌ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ಗ್ರಾಮದಲ್ಲಿ ಕೆಲಹೊತ್ತು ಬಿಗುವಿನ ಸ್ಥಿತಿ ನಿರ್ಮಾಣವಾಗಿತ್ತು.

‘ಸೋಮವಾರ ರಾತ್ರಿ ಕೆಲ ಕಿಡಿಗೇಡಿಗಳು ಕೃತ್ಯವೆಸಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಾನಗಲ್ ಪಿಎಸ್ಐ ಯಲ್ಲಪ್ಪ ಹಿರಗಪ್ಪನವರ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಶಾಂತಿ ಸಭೆ ನಡೆಸಿದರು.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿಲ್ಲ.

‘ಘಟನೆ ಸಂಬಂಧ ದೂರು ನೀಡಿದರೆ ದಾಖಲಿಸಿಕೊಳ್ಳುತ್ತೇವೆ. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಸಹಜವಾಗಿದೆ. ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದು ಪಿಎಸ್ಐ ಯಲ್ಲಪ್ಪ ಹಿರಗಪ್ಪನವರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT